ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೈಂದೂರು: ಬಹೂಪಯೋಗಿ ಬಂದರು ಸ್ಥಾಪಿಸುವಂತೆ ಸಂಸದ ರಾಘವೇಂದ್ರ ಮನವಿ

ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಸಾಗರಮಾಲಾ ಯೋಜನೆಯಡಿ ಬಹುಪಯೋಗಿ ಬಂದರು (ಮಲ್ಟಿ ಪರ್ಪಸ್ ಹಾರ್ಬರ್) ಹಾಗೂ ಗಂಗೊಳ್ಳಿ -ಕುಂದಾಪುರ ನಡುವೆ ಸೇತುವೆ ನಿರ್ಮಾಣಕ್ಕೆ ಒಪ್ಪಿಗೆ ನೀಡುವಂತೆ ಶಿವಮೊಗ್ಗ ಲೋಕಸಭಾ ಸದಸ್ಯರಾದ ಬಿ.ವೈ. ರಾಘವೇಂದ್ರ ಅವರೊಂದಿಗೆ ಕೇಂದ್ರ ಬಂದರು, ಹಡಗು ಹಾಗೂ ಜಲಸಾರಿಗೆ ಸಚಿವರಾದ ಸರ್ಬಾನಂದ ಸೋನಾವಾಲ ಅವರನ್ನು ಹೊಸದಿಲ್ಲಿಯಲ್ಲಿ ಭೇಟಿಯಾದ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಸಲ್ಲಿಸಿ ಆಗ್ರಹಿಸಿದರು.

ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಬೈಂದೂರು ವಿಧಾನಸಭಾ ವ್ಯಾಪ್ತಿಯಲ್ಲಿ ಮೀನುಗಾರಿಕೆ, ಪ್ರವಾಸೋದ್ಯಮ, ವಾಣಿಜ್ಯ ಹಾಗೂ ಆರ್ಥಿಕ ಅಭಿವೃದ್ಧಿಗೆ ಪೂರಕ ಅವಕಾಶಗಳಿದ್ದು, ಇಲ್ಲಿ ಬಹುಉಪಯೋಗಿ ಬಂದರು ಸ್ಥಾಪನೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಂಸದ ರಾಘವೇಂದ್ರ ಒತ್ತಾಯಿಸಿದರು.

ಬೈಂದೂರು ವಿಧಾನಸಭಾ ವ್ಯಾಪ್ತಿಗೆ ಬರುವ ಗಂಗೊಳ್ಳಿಯಿಂದ ಕುಂದಾಪುರಕ್ಕೆ ಬರಲು ಸುಮಾರು 18 ಕಿ.ಮೀ ಸುತ್ತಿ ಬಳಸಿ ಬರಬೇಕಾಗಿದೆ. ಗಂಗೊಳ್ಳಿ ಮೀನುಗಾರಿಕಾ ಬಂದರು ಮತ್ತು ವಾಣಿಜ್ಯ ಕೇಂದ್ರವಾದ ಕುಂದಾಪುರವನ್ನು ಸಂಪರ್ಕಿಸಲು ಸೇತುವೆ ನಿರ್ಮಿಸಿದ್ದಲ್ಲಿ ಗಂಗೊಳ್ಳಿಯಿಂದ ಕುಂದಾಪುರ ಬಹಳ ಹತ್ತಿರವಾಗಲಿದೆ. ಕಚೇರಿ, ಆಸ್ಪತ್ರೆ, ಮೀನುಗಾರಿಕಾ ಹಾಗೂ ಇನ್ನಿತರೆ ಅವಶ್ಯಕತೆ ಗಳನ್ನು ಪೂರೈಸಲು ಇದು ಸಹಕಾರಿಯಾಗಲಿದೆ. ಆದ್ದರಿಂದ ತುರ್ತಾಗಿ ಗಣನೆಗೆ ತೆಗೆದುಕೊಂಡು ಪ್ರಥಮ ಆದ್ಯತೆಯ ಮೇರೆಗೆ ಸೇತುವೆ ನಿರ್ಮಾಣಕ್ಕೆ ಅನುಮೋದನ್ ದೊರಕಿಸಿಕೊಡಬೇಕೆಂದು ಸಂಸದರು ಒತ್ತಾಯಿಸಿದರು.

ಸಭೆಯಲ್ಲಿ ಕೇಂದ್ರ ಸಹಾಯಕ ಸಚಿವ ಶ್ರೀಪಾದ್ ನಾಯಕ್, ಕರ್ನಾಟಕ ರಾಜ್ಯ ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್, ಮೂಲಭೂತ ಸೌಕರ್ಯ ಅಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

26/07/2022 09:46 am

Cinque Terre

1.33 K

Cinque Terre

0

ಸಂಬಂಧಿತ ಸುದ್ದಿ