ಉಡುಪಿ: ಆಗಸ್ಟ್ ತಿಂಗಳಿನ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ ಆ. 20ರಂದು ನಡೆಯಲಿದ್ದು, ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ. ಕಾರ್ಕಳ ಹಿರ್ಗಾನ ಗ್ರಾಮದ ವ್ಯವಸಾಯ ಸೇವಾ ಸಹಕಾರಿ ಸಂಘದ ಸಭಾ ಭವನದಲ್ಲಿ ಗ್ರಾಮ ವಾಸ್ತವ್ಯ ನಡೆಸಲಿದ್ದಾರೆ.
ಸರಕಾರದ ನಿರ್ದೇಶನದಂತೆ ಪ್ರತೀ ತಿಂಗಳ ಮೂರನೇ ಶನಿವಾರ ಜಿಲ್ಲಾಧಿಕಾರಿ ಸಹಿತವಾಗಿ ಕಂದಾಯ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಗ್ರಾಮಕ್ಕೆ ತೆರಳಿ ಅಲ್ಲಿನ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಬೇಕು. ಆದರೆ ತೀವ್ರ ಮಳೆಯ ಕಾರಣ ಕಳೆದ ತಿಂಗಳ ಗ್ರಾಮವಾಸ್ತವ್ಯ ರದ್ದಾಗಿತ್ತು. ಗ್ರಾ.ಪಂ. ವ್ಯಾಪ್ತಿಯ ಸಾರ್ವಜನಿಕರು ಅಹವಾಲು ಯಾ ಅರ್ಜಿಗಳನ್ನು ನೇರವಾಗಿ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿ ಸೂಕ್ತ ಪರಿಹಾರವನ್ನು ಪಡೆಯಬಹುದು ಎಂದು ತಿಳಿಸಲಾಗಿದೆ.
Kshetra Samachara
19/08/2022 12:47 pm