ಉಡುಪಿ: ಕೇಂದ್ರ ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸ್ಥಾಯಿ ಸಮಿತಿ ಬೆಂಗಳೂರಿಗೆ ಭೇಟಿ ನೀಡಿದ್ದು, ಈ ಸಭೆಯಲ್ಲಿ ಸಮಿತಿಯ ಸದಸ್ಯರಾದ ಶಿವಮೊಗ್ಗ ಸಂಸದ ಬಿ ವೈ ರಾಘವೇಂದ್ರ ಭಾಗವಹಿಸಿ ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ದೂರವಾಣಿ ಸಂಪರ್ಕ, ಅಂಗನವಾಡಿ ಶಾಲೆಗಳಿಗೆ ಕಾಂಪೌಂಡ್ ನಿರ್ಮಿಸುವ ಬಗ್ಗೆ ಹಾಗೂ ಕಾಲುಸಂಕಗಳ ( foot over bridge ) ನಿರ್ಮಾಣ ಮಾಡುವ ಬಗ್ಗೆ ಚರ್ಚಿಸಿ ಕೂಡಲೇ ಈ ವಿಷಯಗಳ ಬಗ್ಗೆ ಗಮನಹರಿಸಿ ಸೂಕ್ತ ಪರಿಹಾರವನ್ನು ನೀಡುವ ಬಗ್ಗೆ ವಿನಂತಿಸಿದರು.
ಇದೇ ಸಂದರ್ಭದಲ್ಲಿ ರಾಜ್ಯದ ವಿವಿಧ ಇಲಾಖೆಗಳ ಮುಖ್ಯಸ್ಥರು, ರಾಜ್ಯ ಲೀಡ್ ಬ್ಯಾಂಕಿನ ಮುಖ್ಯಸ್ಥರಾದ ಕೆನರಾ ಬ್ಯಾಂಕು, ಯೂನಿಯನ್ ಬ್ಯಾಂಕ್ ಮುಖ್ಯಸ್ಥರು ಹಾಗೂ ಇತರ ಅಧಿಕಾರಿಗಳೊಂದಿಗೆ ವಿವಿಧ ಗ್ರಾಮೀಣಾಭಿವೃದ್ಧಿ ಯೋಜನೆಗಳ ಅನುಷ್ಟಾನದ ಬಗ್ಗೆ ಸಹ ಚರ್ಚಿಸಲಾಯಿತು. ಹಾಗೂ ರಾಜ್ಯದ ವಿವಿಧ ಕೈಗಾರಿಕೋದ್ಯಮದವರೊಂದಿಗೆ ಸಿ.ಎಸ್.ಆರ್. ಫಂಡ್ ಅನ್ನು ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಬಳಸುವ ಬಗ್ಗೆ ಸಹ ಚರ್ಚಿಸಲಾಯಿತು.
Kshetra Samachara
20/08/2022 08:28 pm