ಉಡುಪಿ: ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 2ರಂದು ಮಂಗಳೂರಿನಲ್ಲಿ ವಿವಿಧ ಯೋಜನೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಮಂಗಳೂರಿಗೆ ಆಗಮಿಸುವ ಹಿನ್ನಲೆಯಲ್ಲಿ ಈ ಕಾರ್ಯಕ್ರಮಕ್ಕೆ ವಿವಿಧ ಭಾಗಗಳಿಂದ ಫಲಾನುಭವಿಗಳನ್ನು ಕರೆತರಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ಹೆಚ್ಚಿನ ಸಂಖ್ಯೆಯ ಬಸ್ಸುಗಳನ್ನು ನಿಯೋಜಿಸಲಾಗಿದೆ.
ಆದ್ದರಿಂದ ಆ ದಿನದಂದು ಮಂಗಳೂರು ವಿಭಾಗ ವ್ಯಾಪ್ತಿಯ ಮಂಗಳೂರು ತಾಲೂಕು, ಧರ್ಮಸ್ಥಳ, ಉಪ್ಪಿನಂಗಡಿ, ಸುಬ್ರಹ್ಮಣ್ಯ, ಕಾಸರಗೋಡು, ಉಡುಪಿ, ಕಾರ್ಕಳ, ಬೈಂದೂರು, ಕುಂದಾಪುರ ಹಾಗೂ ಭಟ್ಕಳ ವ್ಯಾಪ್ತಿಯಲ್ಲಿ ಸಂಚರಿಸುವ ನಿಗಮದ ಸಾರಿಗೆಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳು ಸಹಕರಿಸುವಂತೆ ಕ.ರಾ.ರ.ಸಾ.ನಿಗಮದ ಪ್ರಕಟಣೆ ತಿಳಿಸಿದೆ.
Kshetra Samachara
30/08/2022 08:46 pm