ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಡಿಜಿಟಲ್ ಇನ್ಫ್ರಾಸ್ಟ್ರಕ್ಚರ್ (UDUPI URBAN DIGITAL INFRASTRUCTURE PROJECT) ವಿಷಯಕ್ಕೆ ಸಂಬಂಧಿಸಿದಂತೆ ಡಿ.ಪಿ.ಆರ್ ತಯಾರಿಸಲು ಐ.ಡಿ.ಇ.ಸಿ.ಕೆ (IDECK) ಸಂಸ್ಥೆಯವರಿಗೆ ಕಾರ್ಯಾದೇಶ ನೀಡಲಾಗಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಡಿ.ಪಿ.ಆರ್ ತಯಾರಿಸಲು ವಿವಿಧ ಇಲಾಖೆಗಳ ಸಲಹೆ ಪಡೆಯುವ ನಿಟ್ಟಿನಲ್ಲಿ ಇಂದು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್ ಕಚೇರಿಯಲ್ಲಿ ನಡೆದ ಸಭೆ ನಡೆಯಿತು.ಸಭೆಯಲ್ಲಿ ಶಾಸಕ ಕೆ. ರಘುಪತಿ ಭಟ್ ಭಾಗವಹಿಸಿ ಚರ್ಚಿಸಿದರು.
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಎಚ್, ಪೋಲಿಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚೀಂದ್ರ, ನಗರ ಸಭೆಯ ಪೌರಾಯುಕ್ತ ಉದಯ್ ಶೆಟ್ಟಿ, ಐ.ಟಿ ಟೀಮ್ IDECK ಉಪಾಧ್ಯಕ್ಷರಾದ ಭೂಷಣ್ ಕುಮಾರ್, ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷರಾದ ಅಂಡಾರು ದೇವಿಪ್ರಸಾದ್ ಶೆಟ್ಟಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
Kshetra Samachara
16/09/2022 05:16 pm