ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಪಿ.ಪಿ.ಪಿ. ಮಾದರಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಈ ಯೋಜನೆಯ ಸಮಗ್ರ ಅಧ್ಯಯನಕ್ಕಾಗಿ ಸರ್ಕಾರದ ನಿರ್ದೇಶನದಂತೆ ಶಾಸಕರಾದ ಕೆ. ರಘುಪತಿ ಭಟ್ ನೇತೃತ್ವದಲ್ಲಿ ಉಡುಪಿ ಜಿಲ್ಲಾಧಿಕಾರಿಗಳು ಹಾಗೂ IDECK ಅಧಿಕಾರಿಗಳು ಭೋಪಾಲ್ ಗೆ ಭೇಟಿ ನೀಡಿ ಪಿ.ಪಿ.ಪಿ ಮಾದರಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಅನುಷ್ಠಾನಗೊಳಿಸುವ ಕುರಿತು ಭೋಪಾಲ್ ನ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಿದರು.
ಉಡುಪಿ ಜಿಲ್ಲೆಯ ಕೇಂದ್ರ ಸ್ಥಾನವಾದ ಉಡುಪಿಯಲ್ಲಿ ಪಿ.ಪಿ.ಪಿ. ಮಾದರಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಅನುಷ್ಠಾನಗೊಳಿಸುವ ಕುರಿತು ಈಗಾಗಲೇ ಸೂಕ್ತವಾದ ವರದಿ ತಯಾರಿಸಲಾಗಿದೆ. ಇದನ್ನು ಅನುಷ್ಠಾನಗೊಳಿಸುವಲ್ಲಿ ಈ ಯೋಜನೆಯ ಸಮಗ್ರ ಅಧ್ಯಯನದ ಬಗ್ಗೆ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಯವರ ನಿರ್ದೇಶನದಂತೆ ಶಾಸಕ ಕೆ ರಘುಪತಿ ಭಟ್ ಅವರ ನೇತೃತ್ವದ ತಂಡ ಭೋಪಾಲ್ ಗೆ ಭೇಟಿ ನೀಡಿ ಅಲ್ಲಿ ಪಿ.ಪಿ.ಪಿ. ಮಾದರಿಯಲ್ಲಿ ನಿರ್ಮಾಣಗೊಂಡಿರುವ ಸ್ಮಾರ್ಟ್ ಸಿಟಿಯ ರೂಪುರೇಷೆಗಳ ಬಗ್ಗೆ ಭೋಪಾಲ್ ನ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಿ ಮಾಹಿತಿ ಪಡೆದರು.
ಈ ಸಂದರ್ಭದಲ್ಲಿ ಭೋಪಾಲ್ ಸ್ಮಾರ್ಟ್ ಸಿಟಿ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕರಾದ ಅಂಕಿತ್ ಅಸ್ಥಾನ, ಕಾರ್ಯಪಾಲಕ ಅಭಿಯಂತರರಾದ ಆಶಿಶ್ ಶ್ರೀವಾತ್ಸವ್, ಪಿ.ಆರ್.ಓ. ನಿತಿನ್ ದಾವೆ, ಉಡುಪಿ ಜಿಲ್ಲಾಧಿಕಾರಿಗಳಾದ ಕೂರ್ಮಾ ರಾವ್ ಎಂ, ಐ.ಟಿ. ಟೀಮ್ IDECK ಉಪಾಧ್ಯಕ್ಷರಾದ ಭೂಷಣ್ ಕುಮಾರ್ ಉಪಸ್ಥಿತರಿದ್ದರು.
Kshetra Samachara
12/10/2022 03:52 pm