ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ ಜಿಲ್ಲಾಸ್ಪತ್ರೆ ಮೇಲ್ದರ್ಜೆಗೇರಿಸುವ ಯೋಜನೆಗೆ ಆರ್ಥಿಕ ಇಲಾಖೆ ಒಪ್ಪಿಗೆ: ಶಾಸಕ ರಘುಪತಿ ಭಟ್

ಉಡುಪಿ: ಉಡುಪಿ ಜಿಲ್ಲಾಸ್ಪತ್ರೆ ಮೇಲ್ದರ್ಜೆಗೇರಿಸುವ ಯೋಜನೆಗೆ ಈಗಾಗಲೇ ಆರ್ಥಿಕ ಇಲಾಖೆ ಒಪ್ಪಿಗೆ ಸೂಚಿಸಿದ್ದು, ಸಚಿವ ಸಂಪುಟ ಸಭೆಯ ಒಪ್ಪಿಗೆಯಷ್ಟೇ ದೊರೆಯಬೇಕಾಗಿದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯ ಮಂಡಿಸಿ ಒಪ್ಪಿಗೆ ಪಡೆದು ಯೋಜನೆ ಕಾರ್ಯಗತಗೊಳಿಸಲಾಗುವುದು ಎಂದು ಶಾಸಕ ಕೆ. ರಘುಪತಿ ಭಟ್ ತಿಳಿಸಿದ್ದಾರೆ.

ಉಡುಪಿ ಜಿಲ್ಲಾಸ್ಪತ್ರೆ ಮೇಲ್ದರ್ಜೆಗೇರಿಸುವ ಸಂಬಂಧ ವಿಧಾನಸಭೆ ಅಧಿವೇಶನದಲ್ಲಿ ಚರ್ಚಿಸಿರುವಂತೆ ಹಾಗೂ ಈ ಹಿಂದೆ ಮುಖ್ಯಮಂತ್ರಿಯವರು ಆಯವ್ಯಯದ ಮೇಲೆ ಉತ್ತರಿಸುವಾಗ ನಮ್ಮ ಬೇಡಿಕೆಯಂತೆ ಉಡುಪಿ ಜಿಲ್ಲಾಸ್ಪತ್ರೆ ಮೇಲ್ದರ್ಜೆಗೇರಿಸುವ ಭರವಸೆ ನೀಡಿದ್ದಾರೆ.

ಅದರಂತೆ ಉಡುಪಿ ಜಿಲ್ಲಾ ಆಸ್ಪತ್ರೆಯನ್ನು 250 ಬೆಡ್ ಗಳ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಲು ಕಟ್ಟಡ ಹಾಗೂ ಕಲ್ಪಿಸಬೇಕಾದ ಸೌಲಭ್ಯ ಕುರಿತ ಸಂಪೂರ್ಣ ವರದಿಯನ್ನಾಧರಿಸಿದ ರೂ. 150 ಕೋಟಿ ಯೋಜನೆಯ ಪ್ರಸ್ತಾವನೆಗೆ ಈಗಾಗಲೇ ಆರ್ಥಿಕ ಇಲಾಖೆ ಒಪ್ಪಿಗೆ ನೀಡಿದೆ.

ಈ ಯೋಜನೆ ಪ್ರಸ್ತಾವನೆ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ಅನುಮೋದನೆಗೆ ಬಾಕಿಯಿದ್ದು, ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ಒಪ್ಪಿಗೆ ಪಡೆಯಲಾಗುವುದು. ಆದ್ದರಿಂದ ಉಡುಪಿ ಜಿಲ್ಲಾ ಆಸ್ಪತ್ರೆ ಮೇಲ್ದರ್ಜೆಗೇರಿಸುವ ಸಂಬಂಧ ಪ್ರತಿಭಟನೆ ಹಾಗೂ ಉಪವಾಸ ಸತ್ಯಾಗ್ರಹ ಕೈಗೊಂಡವರು ತಮ್ಮ ಪ್ರತಿಭಟನೆ ವಾಪಸ್ ಪಡೆಯುವಂತೆ ಶಾಸಕ ಕೆ. ರಘುಪತಿ ಭಟ್ ವಿನಂತಿಸಿದ್ದಾರೆ.

Edited By :
Kshetra Samachara

Kshetra Samachara

05/10/2020 06:59 pm

Cinque Terre

20.36 K

Cinque Terre

3

ಸಂಬಂಧಿತ ಸುದ್ದಿ