ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಬಾಲಕಾರ್ಮಿಕರನ್ನು ನೇಮಿಸಿಕೊಂಡಲ್ಲಿ ಜೈಲು; ಜಿಲ್ಲಾಧಿಕಾರಿ ವಾರ್ನಿಂಗ್

ಉಡುಪಿ: ಜಿಲ್ಲೆಯಲ್ಲಿ ಯಾವುದೇ ವ್ಯಕ್ತಿ ಅಥವಾ ಸಂಸ್ಥೆಯು ಬಾಲ ಕಾರ್ಮಿಕರನ್ನು ನೇಮಿಸಿಕೊಳ್ಳುವುದು ಅಥವಾ ದುಡಿಸಿಕೊಳ್ಳುವುದು ಅಪರಾಧವಾಗಿದ್ದು, ಅಂತವರಿಗೆ 2 ವರ್ಷ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಎಚ್ಚರಿಸಿದ್ದಾರೆ.

ಮಣಿಪಾಲದ ರಜತಾದ್ರಿ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ ಉಡುಪಿ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕರ ತಿದ್ದುಪಡಿ ಕಾಯ್ದೆ ಕುರಿತ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಹೆಚ್ಚಿನ ಜನ ಶಿಕ್ಷಣ ಹೊಂದಿ ಪ್ರಜ್ಞಾವಂತರಾಗಿದ್ದು, ಕಾನೂನಿನ ಅರಿವು ಹೊಂದಿ ಅದನ್ನು ಗೌರವಿಸಿ, ಪಾಲನೆ ಮಾಡುವಂತವರಾಗಿದ್ದಾರೆ. ಜಿಲ್ಲೆಯಲ್ಲಿ ಯಾವುದೇ ಬಾಲ ಕಾರ್ಮಿಕರನ್ನು ನಿಯೋಜಿಸಿಕೊಳ್ಳದೆ ಬಾಲ ಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸಬೇಕು, ಬಾಲ ಕಾರ್ಮಿಕರನ್ನಾಗಿ ನಿಯೋಜಿಸಿಕೊಂಡಲ್ಲಿ ಅಂತವರಿಗೆ ಆರು ತಿಂಗಳಿಗಿಂತ ಕಡಿಮೆ ಇಲ್ಲದಂತೆ ಎರಡು ವರ್ಷದವರೆಗೆ ಜೈಲು ಶಿಕ್ಷೆ ಅಥವಾ 20,000 ರೂ. ನಿಂದ 50,000 ರೂ. ವರೆಗೆ ದಂಡ ವಿಧಿಸಲಾಗುವುದು ಎಂದರು.

ಹೊರ ಜಿಲ್ಲೆ, ರಾಜ್ಯಗಳಿಂದ ಉದ್ಯೋಗ ಅರಸಿ ಬರುವ ಕಾರ್ಮಿಕರು ತಮ್ಮ ಮಕ್ಕಳು ದುಡಿಮೆಗೆ ಹೋದಲ್ಲಿ ಹಣ ಗಳಿಸಬಹುದು ಎಂಬ ಮನೋಭಾವದಿಂದ ಸಣ್ಣ ಪುಟ್ಟ ಉದ್ಯೋಗಗಳಿಗೆ ಕಳುಹಿಸಲು ಮುಂದಾಗುತ್ತಾರೆ. ಇದಕ್ಕೆ ಕಡಿವಾಣ ಹಾಕಿ ಈ ಮಕ್ಕಳು ಶಾಲೆಗೆ ಹೋಗುವಂತೆ ಮಾಡಿ, ಶಿಕ್ಷಣವಂತರನ್ನಾಗಿಸಬೇಕೆಂದು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.

Edited By : Vijay Kumar
Kshetra Samachara

Kshetra Samachara

17/02/2021 09:56 am

Cinque Terre

3.94 K

Cinque Terre

0

ಸಂಬಂಧಿತ ಸುದ್ದಿ