ಉಡುಪಿ: ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ಕಾಯ್ದೆ, ಅಗತ್ಯ ವಸ್ತು ಕಾಯ್ದೆ, ವಿದ್ಯುತ್ ಕಾಯ್ದೆ ಮತ್ತು ಕಾರ್ಮಿಕ ಕಾಯ್ದೆ ತಿದ್ದುಪಡಿ ವಿರೋಧಿಸಿ ರೈತ, ಕಾರ್ಮಿಕ ಸಂಘಟನೆಗಳು ದೇಶಾದ್ಯಂತ ಪ್ರತಿಭಟನೆ, ಹೆದ್ದಾರಿ ತಡೆ ಮೊದಲಾದ ಕಾರ್ಯಕ್ರಮಗಳನ್ನು ನಡೆಸಿ, ಸೆ.28ರ ಸ್ವಯಂ ಪ್ರೇರಿತ ಕರ್ನಾಟಕ ಬಂದ್ ಗೆ ಕರೆ ನೀಡಿವೆ.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೊರೊನಾ ತಡೆಗಟ್ಟಲು ವಿಫಲವಾಗಿದ್ದು, ಈ ಸಂಕಷ್ಟದ ಅವಧಿಯಲ್ಲಿ ರೈತ ಕಾರ್ಮಿಕ ವಿರೋಧಿ - ಕಾರ್ಪೊರೇಟ್ ಕಂಪೆನಿಗಳ ಪರವಾದ ಕಾಯ್ದೆಗಳನ್ನು ತರಾತುರಿಯಲ್ಲಿ ಜಾರಿಗೊಳಿಸುತ್ತಿದೆ. ಜನರ ಪ್ರತಿಭಟನೆ ಹತ್ತಿಕ್ಕಲು ಮತ್ತು ಅಧಿಕಾರದ ಗದ್ದುಗೆ ಗಟ್ಟಿಗೊಳಿಸಲು ಕೋಮು ಭಾವನೆ ಕೆರಳಿಸುತ್ತಿದೆ.
ಈ ಹಿನ್ನಲೆಯಲ್ಲಿ ಸೆ. 28ರಂದು ರೈತ ಸಂಘಟನೆಗಳ ಸಮನ್ವಯ ಸಮಿತಿ, ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಹಾಗೂ ದಲಿತ ಪ್ರಗತಿಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಯಶಸ್ವಿಗೊಳಿಸಲು ಸಿಪಿಐಎಂ ಉಡುಪಿ ಜಿಲ್ಲಾ ಸಮಿತಿ ಕರೆ ನೀಡಿದೆ ಎಂದು ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ಹೇಳಿದ್ದಾರೆ.
Kshetra Samachara
25/09/2020 10:12 pm