ಕಾರ್ಕಳ: ಪರಿಶಿಷ್ಟ ಪಂಗಡದ ಪತ್ರಕರ್ತ ಕೃಷ್ಣ ನಾಯ್ಕ್ ಎಂಬವರಿಗೆ ಕಾರ್ಕಳ ಡಿವೈಎಸ್ಪಿ ಭರತ್ ರೆಡ್ಡಿ ತಮ್ಮಕಚೇರಿಯಲ್ಲಿ ಕೂಡಿ ಹಾಕಿ ಮೊಬೈಲ್ ಕಸಿದು ಅವಾಚ್ಯ ಶಬ್ದಗಳಿಂದ ನಿಂದಿಸಿ ದೌರ್ಜನ್ಯವೆಸಗಿದ ಪ್ರಕರಣಕ್ಕೆ ಸಂಬಂಧಿಸಿ ಕರ್ನಾಟಕ ರಾಜ್ಯ ಎಸ್‌ಸಿ- ಎಸ್‌ಟಿ ಆಯೋಗ ಈ ಪ್ರಕರಣದ ಕುರಿತ ದೋಷಾರೋಪಣೆ ಸಂಬಂಧ ಕೈಗೊಂಡ ಕ್ರಮಗಳ ಬಗ್ಗೆ 15 ದಿನಗಳ ಒಳಗಾಗಿ ಲಿಖಿತ ಮಾಹಿತಿ ಸಲ್ಲಿಸಲು ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ಭರತ್ ರೆಡ್ಡಿಯವರಿಗೆ ನೋಟಿಸ್ ಜಾರಿಗೊಳಿಸಿದೆ.
ದೌರ್ಜನ್ಯ ಪ್ರಕರಣದ ಕುರಿತು ಆಯೋಗವು ಜ.7ರಂದು ನೋಟಿಸ್ ಜಾರಿಗೊಳಿಸಿದ್ದು, 15 ದಿನಗಳ ಒಳಗೆ ಈ ನೋಟಿಸ್‌ಗೆ ಉತ್ತರಿಸದಿದ್ದಲ್ಲಿ ಆಯೋಗವು ಕರ್ನಾಟಕ ರಾಜ್ಯ ಅನುಸೂಚಿತ ಜಾತಿ ಮತ್ತು ಪಂಗಡಗಳ ಆಯೋಗದ ಅಧಿನಿಯಮದ ಮೇರೆಗೆ ತನಗೆ ಪ್ರದತ್ತವಾದ ಸಿವಿಲ್ ನ್ಯಾಯಾಲಯಗಳ ಅಧಿಕಾರವನ್ನು ಚಲಾಯಿಸಬಹುದು ಎಂದು ನೋಟಿಸ್‌ನಲ್ಲಿ ಉಲ್ಲೇಖಿಸಿದ್ದು ಮತ್ತು ಆಯೋಗದ ಮುಂದೆ ಖುದ್ದಾಗಿ ಅಥವಾ ಪ್ರತಿನಿಧಿ ಮೂಲಕ ಹಾಜರಾಗುವಂತೆ ಸಮನ್ಸ್ ಹೊರಡಿಸಿದೆ.
ಈ ಪ್ರಕರಣದ ಬಗ್ಗೆ ಆಯೋಗಕ್ಕೆ ಸಲ್ಲಿಕೆಯಾದ ಅರ್ಜಿಯ ಕುರಿತು ಆಯೋಗ ವಿಚಾರಣೆ ಕೈಗೆತ್ತಿಕೊಂಡಿದೆ.
Kshetra Samachara
20/01/2021 01:40 pm