ಕಾರ್ಕಳ : ಕಾರ್ಕಳ ವಕೀಲರ ಸಂಘದ ಅಧ್ಯಕ್ಷರಾಗಿ ಎಸ್‌ಕೆಎಸ್ ಲಾ ಚೇಂಬರ್‌ನ ಸುನಿಲ್ ಕುಮಾರ್ ಶೆಟ್ಟಿ ಆಯ್ಕೆಯಾದರು. ಬಾರ್ ಅಸೋಸಿಯೇಷನ್‌ನಲ್ಲಿ ವಕೀಲರ ಸಂಘದ ಪದಾಧಿಕಾರಿಗಳ ಆಯ್ಕೆಗೆ ಚುನಾವಣೆ ನಡೆದಿದ್ದು, ಸುನಿಲ್ ಕುಮಾರ್ ಶೆಟ್ಟಿ ಅಧ್ಯಕ್ಷರಾಗಿ ಆಯ್ಕೆಯಾದರು. ಕಾರ್ಯದರ್ಶಿಯಾಗಿ ಪದ್ಮಪ್ರಸಾದ್ ಜೈನ್ ಪುನರಾಯ್ಕೆಯಾದರು.ಕಾರ್ಕಳ ಬಾರ್ ಅಸೋಸಿಯೇಷನ್ ನ ಅದ್ಯಕ್ಷರಾಗಿ ಈ ಹಿಂದೆ ಕೆಲಸ ನಿರ್ವಹಿಸಿರುವ ಅವರು ಕಾರ್ಕಳ ತಾಲೂಕು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷರಾಗಿ, ಜನತಾದಳ ಕಾರ್ಕಳ ಇದರ ಅಧ್ಯಕ್ಷರಾಗಿ , ಕಾರ್ಕಳ ತಾಲೂಕಿನ ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷರಾಗಿ, ಕಾರ್ಕಳ ತಾಲೂಕು ಬಿಜೆಪಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು.
ಹಿರಿಯ ನ್ಯಾಯವಾದಿ ಕೆ.ನವೀನ್ ಚಂದ್ರ ಹೆಗ್ಡೆ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು.
Kshetra Samachara
26/10/2021 04:36 pm