ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪೊಲೀಸ್ ದೌರ್ಜನ್ಯ: ಎಸ್.ಐ. ಮೇಲೆ ಶಿಸ್ತು ಕ್ರಮ ಕೈಗೊಳ್ಳುವಂತೆ ಗೃಹ ಸಚಿವರಿಗೆ ಜಿಲ್ಲಾ ಬಿಜೆಪಿ ಒತ್ತಾಯ

ಉಡುಪಿ :ಜಿಲ್ಲೆಯ ಕೋಟತಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೋಟ ಕೊರಗ ಸಮುದಾಯದ ಮದುವೆ ಮನೆಗೆ ಮೆಹಂದಿ ಸಂದರ್ಭದಲ್ಲಿ ನುಗ್ಗಿ ಮದುಮಗನೂ ಸೇರಿದಂತೆ ಹಲವರ ಮೇಲೆ ಲಾಠಿ ಪ್ರಹಾರ ನಡೆಸಿರುವ ಪೊಲೀಸರ ಅಮಾನವೀಯ ಕ್ರಮವನ್ನು ಜಿಲ್ಲಾ ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.

ಮೆಹಂದಿ ಕಾರ್ಯಕ್ರಮದಲ್ಲಿ ಡಿ.ಜೆ. ಹಾಕಿರುವ ನೆಪವೊಡ್ಡಿ ಆಕ್ಷೇಪ ವ್ಯಕ್ತಪಡಿಸಿ ಅನಗತ್ಯ ಲಾಠಿ ಚಾರ್ಜ್ ಮಾಡಿರುವ ಪೊಲೀಸರು ಮತ್ತು ಕರ್ತವ್ಯದಲ್ಲಿದ್ದ ಸಬ್ ಇನ್ಸ್ಪೆಕ್ಟರ್ ವಿರುದ್ಧ ಅಗತ್ಯ ಶಿಸ್ತು ಕ್ರಮ ಕೈಗೊಳ್ಳುವಂತೆ ರಾಜ್ಯ ಗೃಹ ಸಚಿವರನ್ನು ಒತ್ತಾಯಿಸುವುದಾಗಿ ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

28/12/2021 09:02 pm

Cinque Terre

2.36 K

Cinque Terre

0

ಸಂಬಂಧಿತ ಸುದ್ದಿ