ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ವಿದ್ಯಾರ್ಥಿನಿಯರ ಚಾರಿತ್ರ್ಯವಧೆ: ಯಶ್ಪಾಲ್ ಸುವರ್ಣ ಬಂಧಿಸಿ : ಪಾಪ್ಯುಲರ್ ಫ್ರಂಟ್

ಉಡುಪಿ: ಹಿಜಾಬ್ ಹಕ್ಕಿಗಾಗಿ ಹೋರಾಟ ನಡೆಸುತ್ತಿರುವ ಮುಸ್ಲಿಮ್ ವಿದ್ಯಾರ್ಥಿನಿಯರ ಚಾರಿತ್ರ್ಯವಧೆ ನಡೆಸುತ್ತಿರುವ ಬಿಜೆಪಿ ನಾಯಕ ಯಶ್ಪಾಲ್ ಸುವರ್ಣ ವಿರುದ್ಧ ಜೆಜೆ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಬೇಕೆಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಉಡುಪಿ ಜಿಲ್ಲಾಧ್ಯಕ್ಷ ಫಯಾಝ್ ಅಹ್ಮದ್ ಆಗ್ರಹಿಸಿದ್ದಾರೆ.

ತನ್ನ ರಾಜಕೀಯ ಸ್ವಾರ್ಥಕ್ಕಾಗಿ ಹಿಜಾಬ್ ವಿಚಾರವನ್ನು ಮುಂದಿಟ್ಟುಕೊಂಡು ಕಾಲೇಜು ಕ್ಯಾಂಪಸ್ ಗಳಲ್ಲಿ ಉದ್ವಿಗ್ನತೆ ಸೃಷ್ಟಿಸಿದ ಯಶ್ಪಾಲ್ ಸುವರ್ಣ, ಸಂತ್ರಸ್ತ ವಿದ್ಯಾರ್ಥಿನಿಯರ ವಿರುದ್ಧ ನಿರಂತರ ನಾಲಗೆ ಹರಿಯಬಿಡುತ್ತಿದ್ದಾರೆ.

ಆತ ಸ್ವತಃ ಕ್ರಿಮಿನಲ್ ಚಟುವಟಿಕೆಗಳಲ್ಲಿ ಗುರುತಿಸಿಕೊಂಡಿದ್ದರೂ, ಈಗ ಮುಗ್ಧ ವಿದ್ಯಾರ್ಥಿಗಳನ್ನು ಭಯೋತ್ಪಾದಕರೆಂದು ಜರೆದು ಅವರಲ್ಲಿ ಭೀತಿ ಸೃಷ್ಟಿಸುವ ಪ್ರಯತ್ನ ನಡೆಸುತ್ತಿದ್ದಾರೆ. ಪೊಲೀಸ್ ಇಲಾಖೆ ಮೌನ ವಹಿಸಿರುವ ಕಾರಣದಿಂದಲೇ ಇಂತಹ ದ್ವೇಷಪೂರಿತ ಹೇಳಿಕೆಗಳು ಪುನರಾವರ್ತನೆಯಾಗುತ್ತಿವೆ.

ತನ್ನ ಹರಕು ಬಾಯಿಯಿಂದ ವಿದ್ಯಾರ್ಥಿನಿಯರನ್ನು ಅವಮಾನಿಸುತ್ತಿರುವ ಮತ್ತು ಅವರ ಚಾರಿತ್ರ್ಯವಧೆ ನಡೆಸುತ್ತಿರುವ ಯಶ್ಪಾಲ್ ವಿರುದ್ಧ ಪೊಲೀಸರು ಜೆಜೆ ಕಾಯ್ದೆಯಡಿಯಲ್ಲಿ ಕೂಡಲೇ ಸ್ವಯಂಪ್ರೇರಿತ ಪ್ರಕರಣ ದಾಖಲಿಸಬೇಕು. ಅದರೊಂದಿಗೆ ಜಿಲ್ಲೆಯಲ್ಲಿ ಕೋಮು ಉದ್ವಿಗ್ನತೆ ಸೃಷ್ಟಿಸಲು ಮುಸ್ಲಿಮರ ವಿರುದ್ಧ ದ್ವೇಷದ ಹೇಳಿಕೆಗಳನ್ನು ನೀಡುತ್ತಿರುವುದರ ವಿರುದ್ಧವೂ ಪ್ರಕರಣ ದಾಖಲಿಸಬೇಕೆಂದು ಪಯಾಝ್ ಅಹ್ಮದ್ ಒತ್ತಾಯಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

23/04/2022 05:18 pm

Cinque Terre

1.75 K

Cinque Terre

2

ಸಂಬಂಧಿತ ಸುದ್ದಿ