ಉಡುಪಿ : ಜಿಲ್ಲೆಯಲ್ಲಿ ಮಹಿಳೆಯರು ಹಾಗೂ ಮಕ್ಕಳ ಮೇಲೆ ಆಗುವ ದೌರ್ಜನ್ಯಗಳ ಬಗ್ಗೆ ಮಾಹಿತಿ ಅಥವಾ ದೂರುಗಳು ಬಂದಲ್ಲಿ ಅವುಗಳಿಗೆ ಕೂಡಲೇ ಸ್ಪಂದಿಸಿ. ಅವರಿಗೆ ಆತ್ಮಸ್ಥೆರ್ಯ ತುಂಬಿ, ಸಾಂತ್ವನ ಹೇಳುವುದರ ಜೊತೆಗೆ ಕಾನೂನಿನಲ್ಲಿ ಸಿಗುವ ನೆರವು ಒದಗಿಸುವ ಕಾರ್ಯವನ್ನು ಅಧಿಕಾರಿಗಳು ಮಾಡಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಮಟ್ಟದ ವಿವಿಧ ಸಮಿತಿಗಳ ಸಭೆ ಹಾಗೂ ಸಮಗ್ರ ಮಕ್ಕಳ ರಕ್ಷಣಾ ಘಟಕದ ವಿವಿಧ ಸಮಿತಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.
ಸಮಾಜದಲ್ಲಿ ದುರ್ಬಲರಾದ ಮಹಿಳೆಯರು ಹಾಗೂ ಮಕ್ಕಳ ಮೇಲೆ ಸಾಮಾನ್ಯವಾಗಿ ದಬ್ಬಾಳಿಕೆ ಹಾಗೂ ದೌರ್ಜನ್ಯಗಳು ಆಗುತ್ತಿರುತ್ತವೆ. ಇವುಗಳನ್ನು ಎದುರಿಸುವ ಶಕ್ತಿ ಅವರಲ್ಲಿ ಇರುವುದಿಲ್ಲ. ಅವರು ತೊಂದರೆ ಗೊಳಗಾದ ಬಗ್ಗೆ ಮಾಹಿತಿಗಳು ಕಂಡುಬಂದಲ್ಲಿ ಅವರಿಗೆ ಎಲ್ಲಾ ರೀತಿಯ ನೆರವನ್ನು ಒದಗಿಸಬೇಕು ಎಂದರು.
ಜಿಲ್ಲೆಯಲ್ಲಿ ಬಾಲ್ಯ ವಿವಾಹ ಪ್ರಕರಣಗಳು ಕಂಡುಬಂದಿಲ್ಲ ಎಂದು ಹೇಳಲಾಗುತ್ತಿದೆ. ಆದರೆ ಕೆಲವು ತಾಲೂಕುಗಳಲ್ಲಿ 18 ವರ್ಷ ದೊಳಗಿನ ಹೆಣ್ಣು ಮಕ್ಕಳು ಪ್ರಸವ ಪೂರ್ವ ಸ್ಕ್ಯಾನಿಂಗ್‌ಗೆ ಬರುತ್ತಿದ್ದಾರೆ ಎಂದ ಅವರು, ಬಾಲ್ಯ ವಿವಾಹ ಪ್ರಕರಣಗಳನ್ನು ಇತರ ಇಲಾಖೆ ಹಾಗೂ ಸಾರ್ವಜನಿಕರ ಸಹಾಯದಿಂದ ತಡೆಯಲು ಮುಂದಾಗಬೇಕು ಎಂದರು.
Kshetra Samachara
29/04/2022 09:54 pm