ಉಡುಪಿ: ಜಿಲ್ಲಾ ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆಯ ಅಧಿಕಾರಿಗಳು ಜೂನ್ 15 ರಂದು ಬೆಳಗ್ಗೆ 11 ರಿಂದ ಅಪರಾಹ್ನ 1:00ರವರೆಗೆ ಬೈಂದೂರು ಪ್ರವಾಸಿ ಮಂದಿರ, ಅಪರಾಹ್ನ 2:30 ರಿಂದ ಸಂಜೆ 4:30ರವರೆಗೆ ಕುಂದಾಪುರ ಪ್ರವಾಸಿ ಮಂದಿರ, ಜೂ.16 ರಂದು ಬೆಳಗ್ಗೆ 11 ರಿಂದ ಅಪರಾಹ್ನ 1:00 ರವರೆಗೆ ಕಾರ್ಕಳ ಪ್ರವಾಸಿ ಮಂದಿರ ಹಾಗೂ ಮ. 2:30 ರಿಂದ ಸಂಜೆ 4:30 ರವರೆಗೆ ಹೆಬ್ರಿ ಪ್ರವಾಸಿ ಮಂದಿರದಲ್ಲಿ ಮತ್ತು ಜೂ.17 ರಂದು ಬೆಳಗ್ಗೆ 11 ರಿಂದ ಅಪರಾಹ್ನ 1:00 ರವರೆಗೆ ಬ್ರಹ್ಮಾವರ ವ್ಯವಸಾಯ ಸೇವಾ ಸಹಕಾರಿ ಸಂಘದ ಕಟ್ಟಡದಲ್ಲಿ ಸಾರ್ವಜನಿಕರಿಂದ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ದೂರು ಹಾಗೂ ಅಹವಾಲು ಸ್ವೀಕರಿಸಲಿದ್ದಾರೆ.
ಸಾರ್ವಜನಿಕ ನೌಕರ ತನ್ನ ಕರ್ತವ್ಯಗಳನ್ನು ನಿರ್ವಹಿಸಲು ಅನಗತ್ಯ ವಿಳಂಬ ಮಾಡಿದಲ್ಲಿ, ನಿರ್ಲಕ್ಷ್ಯತೆ ತೋರಿದಲ್ಲಿ ಅಥವಾ ಲಂಚ ಕೇಳಿದಲ್ಲಿ, ಸಾರ್ವಜನಿಕ ನೌಕರನು ತನ್ನ ಸೇವಾವಧಿಯಲ್ಲಿ ಆದಾಯಕ್ಕಿಂತ ಹೆಚ್ಚು ಅಕ್ರಮ ಆಸ್ತಿಯನ್ನು ಹೊಂದಿದ್ದಲ್ಲಿ ದೂರು ಸ್ವೀಕರಿಸಲಾಗುವುದು ಎಂದು ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆಯ ಉಪಾಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Kshetra Samachara
09/06/2022 09:16 pm