ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಮನೆ ಬಾಗಿಲಿಗೆ ಪಿಂಚಣಿ ಯೋಜನೆ ಸದುಪಯೋಗಪಡಿಸಿಕೊಳ್ಳಿ: ಡಿ.ಸಿ ಕೂರ್ಮಾರಾವ್

ಉಡುಪಿ : ಕಂದಾಯ ಇಲಾಖೆಯ ವಿನೂತನ ಯೋಜನೆಯಾದ 'ಹಲೋ ಕಂದಾಯ ಸಚಿವರೇ..' ಸಹಾಯವಾಣಿ ಸಂಖ್ಯೆ 155245ಕ್ಕೆ ಉಚಿತವಾಗಿ ಕರೆ ಮಾಡುವ ಮೂಲಕ ಕುಟುಂಬದ ವಾರ್ಷಿಕ ಆದಾಯ 32 ಸಾವಿರ ರೂ.ಕ್ಕಿಂತ ಕಡಿಮೆ ಇರುವ ವೃದ್ಧರು, ವಿಶೇಷ ಚೇತನರು, ವಿಧವೆಯರು ಹಾಗೂ ಅವಿವಾಹಿತ ಅಥವಾ ವಿಚ್ಚೇದಿತ ಮಹಿಳೆಯರು ಮಾಸಿಕ ಪಿಂಚಣಿ ಸೌಲಭ್ಯಕ್ಕಾಗಿ ತಮ್ಮ ಆಧಾರ್ ಸಂಖ್ಯೆಯನ್ನು ಒದಗಿಸಿ, ಕೋರಿಕೆ ಸಲ್ಲಿಸಬಹುದಾಗಿದೆ.

ಈ ಯೋಜನೆಯಡಿ ಪಿಂಚಣಿ ಕೋರಿಕೆ ಸ್ವೀಕರಿಸಿದ 72 ಗಂಟೆಗಳಲ್ಲಿ ಅರ್ಹರಿಗೆ ಪಿಂಚಣಿ ಮಂಜೂರಾತಿ ಮಾಡಿ ಮನೆ ಬಾಗಿಲಿಗೆ ಪಿಂಚಣಿ ಆದೇಶವನ್ನು ತಲುಪಿಸಲಾಗುವುದು. ಸಾರ್ವಜನಿಕರು ಇದರ ಸದುಪಯೋಗಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

11/06/2022 12:24 pm

Cinque Terre

1.6 K

Cinque Terre

0

ಸಂಬಂಧಿತ ಸುದ್ದಿ