ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: 11 ಜನ ಅತ್ಯಾಚಾರಿಗಳ ಬಿಡುಗಡೆ ಆದೇಶವನ್ನು ಕೂಡಲೇ ರದ್ದು ಮಾಡಿ: ನಸೀಮಾ ಫಾತಿಮಾ

ಉಡುಪಿ : ಬಿಲ್ಕಿಸ್ ಬಾನು ಪ್ರಕರಣದ 11 ಆರೋಪಿಗಳನ್ನು ಮೋದಿ ಸರಕಾರ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲೇ ಬಿಡುಗಡೆಗೊಳಿಸಿದೆ. ಇದರಿಂದ ನಮ್ಮ ದೇಶದ ಹೀನಾಯ ಸ್ಥಿತಿ ಯಾವ ರೀತಿ ಇದೆ ಎಂಬುದು ಎಲ್ಲರಿಗೂ ಅರ್ಥವಾಗುತ್ತದೆ. ದೇಶದ ಸಂವಿಧಾನ ಒಪ್ಪದೆ ಮನುಸ್ಮೃತಿಯನ್ನು ಒಪ್ಪುವ ನಮ್ಮನ್ನು ಆಳುವವರು ಮಹಿಳೆಯರನ್ನು ಕೀಳಾಗಿ ಕಾಣುತ್ತಿದ್ದಾರೆ. ಇಲ್ಲಿ ಬ್ರಾಹ್ಮಣರಿಗೆ ಒಂದು ಕಾನೂನು ಅಲ್ಪಸಂಖ್ಯಾತರಿಗೆ ಇನ್ನೊಂದು ಕಾನೂನು ಎಂದು ನ್ಯಾಷನಲ್ ವುಮೆನ್ಸ್ ಫ್ರಂಟ್‌ನ ಜಿಲ್ಲಾಧ್ಯಕ್ಷೆ ನಸೀಮಾ ಫಾತಿಮಾ ಹೇಳಿದ್ದಾರೆ.

ಅತ್ಯಾಚಾರ ಪ್ರಕರಣದ 11 ಆರೋಪಿಗಳ ಬಿಡುಗಡೆ ಆದೇಶವನ್ನು ಕೂಡಲೇ ರದ್ದು ಮಾಡಬೇಕು. ಈಗಾಗಲೇ ಬಿಲ್ಕಿಸ್ ಬಾನು ಕುಟುಂಬಕ್ಕೆ ಘೋಷಿಸಿರುವ ಪರಿಹಾರವನ್ನು ಕೂಡಲೇ ನೀಡಬೇಕು. ಆಕೆಗೆ ಸಂವಿಧಾನದ ಪ್ರಕಾರ ಬದುಕುವ ಹಕ್ಕನ್ನು ಒದಗಿಸಿಕೊಡಬೇಕು ಎಂದು ಅವರು ಒತ್ತಾಯಿಸಿದರು.

ಬಿಲ್ಕಿಸ್ ಬಾನು ಅತ್ಯಾಚಾರ ಆರೋಪಿಗಳನ್ನು ಬಿಡುಗಡೆ ಗೊಳಿಸಿರುವುದನ್ನು ಖಂಡಿಸಿ ನ್ಯಾಷನಲ್ ವಿಮೆನ್ಸ್ ಫ್ರೆಂಟ್ ಉಡುಪಿ ಘಟಕದ ನೇತೃತ್ವದಲ್ಲಿ ಉಡುಪಿ ಅಜ್ಜರಕಾಡು ಹುತಾತ್ಮ ಸಾಕರದ ಬಳಿ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ಉಡುಪಿ ಜಿಲ್ಲಾ ಸಮಿತಿ ಸದಸ್ಯರಾದ ನಸೀಮ್, ಸೌಲತ್ ಮೊದಲಾದವರು ಉಪಸ್ಥಿತರಿದ್ದರು. ಜಿಲ್ಲಾ ಸಮಿತಿ ಸದಸ್ಯೆ ಸಮ್ರನ್ ಅಫೋಝ್ ಕಾರ್ಯಕ್ರಮ ನಿರೂಪಿಸಿದರು.

Edited By : PublicNext Desk
Kshetra Samachara

Kshetra Samachara

22/08/2022 06:45 pm

Cinque Terre

1.51 K

Cinque Terre

0

ಸಂಬಂಧಿತ ಸುದ್ದಿ