ಮಂಗಳೂರು: ಕಾರು ಹಾಗೂ ಬೈಕ್ ಮಧ್ಯೆ ಭೀಕರ ಅಪಘಾತ ನಡೆದ ಘಟನೆ ಮಂಗಳೂರಿನ ಯೆಯ್ಯಾಡಿ ಬಳಿ ರವಿವಾರ ರಾತ್ರಿ ನಡೆದಿದೆ.
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಛಿದ್ರವಾಗಿದ್ದು, ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
Kshetra Samachara
11/10/2020 10:29 pm