ಮುಲ್ಕಿ: ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ವಿಜಯ ಸನ್ನಿಧಿ ಬಳಿಯ ಉಡುಪಿ ಕಡೆಗೆ ಹೋಗುವ ಸರ್ವಿ ಸ್ ರಸ್ತೆಯಲ್ಲಿ ಸ್ಕೂಟರ್ - ಬೈಕ್ ಮುಖಾಮುಖಿ ಡಿಕ್ಕಿ ಹೊಡೆದು ಸವಾರರಿಬ್ಬರೂ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸ್ಕೂಟರ್ ಸವಾರ ಮಿಷನ್ ಕಂಪೌಂಡ್ ನಿವಾಸಿ ರಂಜನ್ ಜತ್ತನ್ನ ಎಂಬವರು ಚರ್ಚ್ ಕಡೆಗೆ ರಾಷ್ಟ್ರೀಯ ಹೆದ್ದಾರಿ ಸರ್ವಿಸ್ ರಸ್ತೆಯಲ್ಲಿ ತೆರಳುತ್ತಿದ್ದಾಗ ಏಕಾಏಕಿ ಬೈಕ್ ಸವಾರ ಡಿಕ್ಕಿ ಹೊಡೆದಿದ್ದಾನೆ. ಅಪಘಾತದ ರಭಸಕ್ಕೆ ಬೈಕ್ ಸವಾರ ಬಪ್ಪನಾಡು ಬಳಿಯ ನಿವಾಸಿ ಸಂಜಯ ಹಾಗೂ ಸ್ಕೂಟರ್ ಸವಾರ ರಂಜನ್ ಜತ್ತನ್ನ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸುರತ್ಕಲ್ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ 66 ಚತುಷ್ಪಥ ಗೊಂಡ ಬಳಿಕ ಮುಲ್ಕಿ ಬಿಲ್ಲವ ಸಂಘದ ಬಳಿಯಲ್ಲಿ ಅವೈಜ್ಞಾನಿಕ ತಿರುವಿನಿಂದ ಹಾಗೂ ಸರ್ವಿಸ್ ರಸ್ತೆ ಅಸಮರ್ಪಕ ಕಾಮಗಾರಿಯಿಂದ ಅನೇಕ ಅಪಘಾತಗಳು ಸಂಭವಿಸಿದೆ. ಈ ಬಗ್ಗೆ ಅನೇಕ ಬಾರಿ ಹೆದ್ದಾರಿ ಇಲಾಖೆಗೆ ದೂರು ನೀಡಿದ್ದರೂ ಸರಿಪಡಿಸಿಲ್ಲ ಎಂದು ಸ್ಥಳೀಯ ರಿಕ್ಷಾ ಚಾಲಕ ಮೋಹನ್ ಕುಬೆವೂರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಿಧಾನಗತಿಯಲ್ಲಿ ತೆರಳಬೇಕಾದ ಏಕಮುಖ ಸರ್ವಿಸ್ ರಸ್ತೆಯಲ್ಲಿ ಅಪಘಾತ ನಡೆಯುತ್ತಿರುವುದು ನಾಗರಿಕರನ್ನು ಆತಂಕಕ್ಕೀಡುಮಾಡಿದೆ.
Kshetra Samachara
12/10/2020 03:19 pm