ಬಂಟ್ವಾಳ: ನಿನ್ನೆಯಿಂದ ಸುರಿದ ಭಾರೀ ಮಳೆಗೆ ಬಂಟ್ವಾಳ ತಾಲೂಕಿನ ಮಹತೋಭಾರ ಶ್ರೀ ಕಾರಿಂಜೇಶ್ವರ ದೇವಸ್ಥಾನದ ತಡೆಗೋಡೆ ಕುಸಿದು ಬಿದ್ದಿದೆ.
ಈಶ್ವರ (ಶ್ರೀ ಕಾರಿಂಜೇಶ್ವರ) ದೇವಸ್ಥಾನದ ಎಡ ಪಾರ್ಶ್ವ ದ ಬದಿಗೆ ಕಟ್ಟಿದ್ದ ಕಲ್ಲಿನ ತಡೆಗೋಡೆ ಕುಸಿದು ಬಿದ್ದಿದ್ದು, ಬುಧವಾರ ಬೆಳಗ್ಗೆ ಸಿಬಂದಿ ಗಮನಕ್ಕೆ ಬಂದಿದೆ.
ಇಲ್ಲಿ ಅಂಗಣದಲ್ಲಿ ವಾನರ ಸಮೂಹಕ್ಕೆ ನೈವೇದ್ಯ ನೀಡುತ್ತಿದ್ದು, ಅಂಗಣದ ಇಂಟರ್ ಲಾಕ್ ಕಿತ್ತು ಹೋಗಿದೆ. ದೇವಸ್ಥಾನ ಬೃಹತ್ ಬಂಡೆಯ ಮೇಲೆ ಸ್ಥಾಪಿತಗೊಂಡಿದ್ದು, ನಾಲ್ಕು ಯುಗಗಳ ಪುರಾಣ ಇತಿಹಾಸ ಹೊಂದಿದೆ.
ಕುಸಿದ ಭಾಗದ ಕೆಳಭಾಗದಲ್ಲಿ ಕಲ್ಲು, ಮಣ್ಣಿನ ದಿಬ್ಬವಿದ್ದು, ದೇವಸ್ಥಾನಕ್ಕೆ ಯಾವುದೇ ಹಾನಿಯಾಗಿಲ್ಲ ಎಂದು ಆಡಳಿತಾಧಿಕಾರಿ ನೋಣಯ್ಯ ನಾಯ್ಕ್ ತಿಳಿಸಿದ್ದಾರೆ. ತಜ್ಞರ ಪರಿಶೀಲನೆ ಬಳಿಕ ಪರಿಹಾರೋಪಾಯ ನಡೆಸಬೇಕಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
Kshetra Samachara
14/10/2020 12:30 pm