ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಮಧ್ಯವಯಸ್ಕ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಉಡುಪಿ: ನಗರದ ಇಂದಿರಾನಗರದ ನಿವಾಸಿ ಸ್ಟೀವನ್ ಪ್ರಭಾಕರ್ ಅಮ್ಮಣ್ಣ(49 ) ಇಂದು ಮನೆಯ ಜಂತಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮನೆಮಂದಿ ಇದ್ದಾಗಲೇ ಈ ಘಟನೆ ಸಂಭವಿಸಿದೆ. ವಿಷಯ ತಿಳಿದ ತಕ್ಷಣ ಮನೆ ಮಂದಿ ಹಗ್ಗದಿಂದ ಇಳಿಸಿ ಆಸ್ಪತ್ರೆಗೆ ಸಾಗಿಸಿದರಾದರೂ ಅವರು ಆಗಲೇ ಮೃತಪಟ್ಟಿದ್ದರು.

ಸಮಾಜಸೇವಕ ನಿತ್ಯಾನಂದ ಒಳಕಾಡು ತಮ್ಮ ಆಂಬ್ಯುಲೆನ್ಸ್ ಮೂಲಕ ಉಚಿತವಾಗಿ ಜಿಲ್ಲಾಸ್ಪತ್ರೆಗೆ ಕರೆದೊಯ್ದರು. ಆದರೆ ಪರೀಕ್ಷಿಸಿದ ವೈದ್ಯರು ವ್ಯಕ್ತಿ ಮೃತಪಟ್ಟಿರುವುದನ್ನು ದೃಢೀಕರಿಸಿದರು. ಘಟನೆಯ ಬಗ್ಗೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

Edited By : Manjunath H D
Kshetra Samachara

Kshetra Samachara

16/10/2020 10:03 pm

Cinque Terre

35.58 K

Cinque Terre

6