ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಸಮೀಪ ಮಣ್ಣಗುಂಡಿ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ತರಕಾರಿ ಸಾಗಾಟದ ವಾಹನ ತೋಡಿಗೆ ಬಿದ್ದ ಘಟನೆ ಇಂದು ಬೆಳಗ್ಗಿನ ಜಾವ ನಡೆದಿದೆ.
ಹಾಸನ ಮೂಲದ ಈ ಟೆಂಪೋದಲ್ಲಿ ಪುತ್ತೂರು ಕಡೆಗೆ ತರಕಾರಿ ಸಾಗಾಟ ಮಾಡಲಾಗುತ್ತಿತ್ತು. ರಸ್ತೆಯಲ್ಲಿ ಇರುವ ಬೃಹತ್ ಗುಂಡಿ ತಪ್ಪಿಸಲು ಹೋಗಿ ಈ ದುರ್ಘಟನೆ ನಡೆದಿದೆ ಎಂಬುದಾಗಿ ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.
ಅದೃಷ್ಟವಶಾತ್ ಘಟನೆಯಲ್ಲಿ ಚಾಲಕ ಹಾಗೂ ನಿರ್ವಾಹಕ ಯಾವುದೇ ರೀತಿಯ ಪ್ರಾಣಾಪಾಯ ಸಂಭವಿಸದೇ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
Kshetra Samachara
22/10/2020 06:35 pm