ಮಂಗಳೂರು: ಮಂಗಳೂರು ಹೊರವಲಯದ ತೊಕ್ಕೊಟ್ಟು ಓವರ್ ಬಿಡ್ಜ್ ನಲ್ಲಿ ಭೀಕರ ಅಪಘಾತ ಸಂಭವಿಸಿ ಬೈಕ್ ನ ಹಿಂಬದಿ ಸವಾರೆಯಾಗಿದ್ದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.
ಬೈಕ್ ಸವಾರನೂ ಲಾರಿಯಡಿಗೆ ಬಿದ್ದಿದ್ದು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ರಭಸಕ್ಕೆ ಬೈಕ್, ಕಂಟೈನರ್ ಲಾರಿಯಡಿಗೆ ಬಿದ್ದು ಅಪ್ಪಚ್ಚಿಯಾಗಿದೆ. ಅತಿ ವೇಗದ ಚಾಲನೆ ಹಾಗೂ ಓವರ್ ಟೇಕ್ ಯತ್ನದ ವೇಳೆ ಬೈಕ್ ನಿಯಂತ್ರಣ ತಪ್ಪಿ ಲಾರಿಯಡಿಗೆ ಬಿದ್ದಿದೆ ಎನ್ನಲಾಗಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿ
Kshetra Samachara
27/10/2020 07:13 pm