ಉಡುಪಿ: ಕಲ್ಯಾಣಪುರ- ಸಂತೆಕಟ್ಟೆ ಸಮೀಪ ಬೃಂದಾವನ ಹೋಟೆಲ್ ಹಿಂಭಾಗದ ವಾಹನ ನಿಲುಗಡೆ ಸ್ಥಳದಲ್ಲಿ ಅಪರಿಚಿತ ಗಂಡಸಿನ ಶವ ಕೊಳೆತ ಸ್ಥಿತಿಯಲ್ಲಿ ಮಂಗಳವಾರ ಪತ್ತೆಯಾಗಿದೆ.ಈ ಸಂಬಂಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಠಾಣಾಧಿಕಾರಿ ಇ. ಶಕ್ತಿವೇಲು ಕಾನೂನು ಪ್ರಕ್ರಿಯೆ ನಡೆಸಿದರು.
ಶವವನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿ ಇಡಲಾಗಿದೆ. ವಾರೀಸುದಾರರು ಉಡುಪಿ ನಗರ ಪೊಲೀಸ್ ಠಾಣೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸಲು ಸೂಚಿಸಲಾಗಿದೆ. ಸಾಮಾಜಿಕ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು, ಚಂದ್ರಕಾಂತ್ ಲಕ್ಷ್ಮೀ ನಗರ ಅವರು ಶವ ಸಾಗಿಸಲು ಇಲಾಖೆಗೆ ಸಹಕರಿಸಿದರು.
Kshetra Samachara
10/11/2020 02:09 pm