ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಡುಪಣಂಬೂರು: ಡಿವೈಡರ್ ಮೇಲೇರಿದ ಪಿಕಪ್ ವಾಹನ!; ಚಾಲಕ ಸಹಿತ ಇಬ್ಬರು ಪಾರು

ಮುಲ್ಕಿ: ರಾಷ್ಟ್ರೀಯ ಹೆದ್ದಾರಿ 66 ಮುಲ್ಕಿ ಸಮೀಪದ ಪಡುಪಣಂಬೂರು ಪೆಟ್ರೋಲ್ ಬಂಕ್ ಬಳಿ ಅಶೋಕ್ ಲೈಲ್ಯಾಂಡ್ ಪಿಕಪ್ ವಾಹನ ಅಪಘಾತ ಸಂಭವಿಸಿದ್ದು, ವಾಹನದಲ್ಲಿದ್ದ ಚಾಲಕ ಸಹಿತ ಇಬ್ಬರು ಪವಾಡಸದೃಶ ಪಾರಾಗಿದ್ದಾರೆ.

ಮಂಡ್ಯ ಕೆ.ಆರ್. ಪೇಟೆಯಿಂದ ಮಂಗಳೂರಿಗೆ ಹೂವನ್ನು ತೆಗೆದುಕೊಂಡು ಬರುತ್ತಿದ್ದ ಅಶೋಕ್ ಲೈಲ್ಯಾಂಡ್ ಪಿಕಪ್ ಇಂದು ಬೆಳಿಗ್ಗೆ 9ರ ಸುಮಾರಿಗೆ ಪಡುಪಣಂಬೂರು ಸಮೀಪಿಸುತ್ತಿದ್ದಂತೆಯೇ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ಪಲ್ಟಿಯಾಗಿ ಬಿದ್ದಿದೆ.

ಅಪಘಾತ ನಡೆದ ಕೂಡಲೇ ಸ್ಥಳೀಯರು ಧಾವಿಸಿ ವಾಹನದೊಳಗೆ ಸಿಲುಕಿಕೊಂಡಿದ್ದ ಚಾಲಕ ಸಹಿತ ಇಬ್ಬರನ್ನು ರಕ್ಷಿಸಿದ್ದಾರೆ. ಅಪಘಾತದಿಂದ ಪಿಕಪ್ ಗೆ ಸಂಪೂರ್ಣ ಹಾನಿಯಾಗಿದ್ದು ಸುರತ್ಕಲ್ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Edited By : Nagesh Gaonkar
Kshetra Samachara

Kshetra Samachara

14/11/2020 01:21 pm

Cinque Terre

37.2 K

Cinque Terre

1

ಸಂಬಂಧಿತ ಸುದ್ದಿ