ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಚ್ಚಿಲ: ಲಾರಿ ಚಕ್ರಕ್ಕೆ ಸಿಲುಕಿ ಸ್ಕೂಟರ್ ಸವಾರ ಮೃತ್ಯು

ಉಚ್ಚಿಲ: ಸ್ಕೂಟರ್ ಸವಾರನೋರ್ವ ಲಾರಿ ಚಕ್ರಕ್ಕೆ ಸಿಲುಕಿ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದ ಘಟನೆ ಉಚ್ಚಿಲ ಪೇಟೆಯಲ್ಲಿ ಸಂಭವಿಸಿದೆ.

ಉಚ್ಚಿಲ ಪೇಟೆಯಿಂದ ಪಡುಬಿದ್ರಿ ಕಡೆಗೆ ಹೋಗುತ್ತಿದ್ದ ಸ್ಕೂಟರ್ ಸವಾರ, ಮಂಗಳೂರಿನತ್ತ ಗ್ಯಾಸ್ ಸಿಲಿಂಡರ್ ತುಂಬಿಕೊಂಡು

ಸಾಗುತ್ತಿದ್ದ ಲಾರಿಯ ಚಕ್ರಕ್ಕೆ ಸಿಲುಕಿ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ.

ಮೃತರನ್ನು ಹೆಜಮಾಡಿ ಅಡ್ಕ ಹೌಸ್ ನಿವಾಸಿ ವಾಸು ಬಿ. ಕೋಟ್ಯಾನ್ (65) ಎಂದು ಗುರುತಿಸಲಾಗಿದೆ. ಶವವನ್ನು ಆಂಬ್ಯುಲೆನ್ಸ್ ಮೂಲಕ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.

Edited By : Manjunath H D
Kshetra Samachara

Kshetra Samachara

23/11/2020 11:37 am

Cinque Terre

30.91 K

Cinque Terre

2

ಸಂಬಂಧಿತ ಸುದ್ದಿ