ಕಾಪು : ಪಾದಚಾರಿಯೊರ್ವರಿಗೆ ಕಾರು ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದ ಘಟನೆ ಉಚ್ಚಿಲ ಪೇಟೆಯಲ್ಲಿ ಮಂಗಳವಾರ ಬೆಳಿಗ್ಗೆ ಸಂಭವಿಸಿದೆ.
ಮೃತರನ್ನು ನಿಟ್ಟೆ ನಿವಾಸಿ ಸುಧಾಕರ ಶೆಟ್ಟಿ ಎಂದು ಗುರುತಿಸಲಾಗಿದೆ. ನರ್ಸರಿಯಲ್ಲಿ ಸಸಿ ಖರೀದಿಸಿ ರಾಷ್ಟ್ರೀಯ ಹೆದ್ದಾರಿ 66 ರ ಪಕ್ಕದಲ್ಲಿ ಉಚ್ಚಿಲ ಪೇಟೆಯತ್ತ ಹೋಗುತ್ತಿದ್ದು,ರಾಷ್ಟ್ರೀಯ ಹೆದ್ದಾರಿಯಲ್ಲಿ ಕುಂದಾಪುರದಿಂದ ಮಂಗಳೂರಿಗೆ ಚಲಿಸುತ್ತಿದ್ದ ಕಾರು ಡಿಕ್ಕಿಯಾಗಿದೆ.ಅಪಘಾತದ ತೀವ್ರತೆಗೆ ಗಂಭೀರವಾಗಿ ಗಾಯಗೊಂಡವರನ್ನು ಸ್ಥಳೀಯ ಯುವಕರ ಸಹಕಾರದಿಂದ ಆಂಬ್ಯುಲೆನ್ಸ್ ಮೂಲಕ ಉಡುಪಿಯ ಆಸ್ಪತ್ರೆಗೆ ಸಾಗಿಸಲಾಗಿದ್ದು,ಅದಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಉಚ್ಚಿಲ ಪೊಲ್ಯ ಕ್ರಾಸ್ ಬಳಿಯ ಮಹಾಲಿಂಗೇಶ್ವರ ದೇವಸ್ಥಾನದ ವಿರುದ್ಧ ದಿಕ್ಕಿನಲ್ಲಿ ದೇವರಿಗೆ ಕೈ ಮುಗಿಯುತ್ತಿದ್ದ ವೇಳೆ ಅಪಘಾತ ನಡೆದಿರಬಹುದೆಂದು ಸಾರ್ವಜನಿಕರು ಸಂಶಯ ವ್ಯಕ್ತಪಡಿಸಿದ್ದಾರೆ.ಪಡುಬಿದ್ರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.
ಉಚ್ಚಿಲ ರಾಷ್ಟ್ರೀಯ ಹೆದ್ದಾರಿ ಪಕ್ಕದ ಪೊಲ್ಯ ಕ್ರಾಸ್ ಬಳಿ ವಿದ್ಯುತ್ ಕಂಬಕ್ಕೆ ಅಳವಡಿಸಲಾದ ಬ್ಯಾನರ್ ರಸ್ತೆಗೆ ಅಡ್ಡಲಾಗಿದ್ದು,ಇದರಿಂದಾಗಿ ರಸ್ತೆ ದಾಟುವವರಿಗೆ ಹೆದ್ದಾರಿಯಲ್ಲಿ ಚಲಿಸುವ ವಾಹನಗಳು ಗೋಚರಿಸದೆ ಅಪಘಾತಗಳು ನಡೆಯುತ್ತಿವೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
Kshetra Samachara
24/11/2020 11:16 am