ಮಂಗಳೂರು: ಇಲ್ಲಿನ ಎನ್‌ಐಟಿಕೆ ಸಮೀಪ ಬೈಕ್ ವೊಂದಕ್ಕೆ ಮೀನಿನ ಲಾರಿಯೊಂದು ಡಿಕ್ಕಿಹೊಡೆದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ನಡೆದಿದೆ.
ಬೈಕ್ ಸವಾರ ಮಂಗಳೂರು ಕಡೆಯಿಂದ ಉಡುಪಿ ಕಡೆ ತೆರಳುವ ರಾಷ್ಟ್ರೀಯ ಹೆದ್ದಾರಿಯಾಗಿ ಮಧ್ಯ ಕಡೆ ತಿರುವು ಪಡೆಯುತ್ತಿದ್ದ ವೇಳೆ ಉಡುಪಿಕಡೆಯಿಂದ ಬರುತ್ತಿದ್ದ ಮೀನಿನ ಲಾರಿ ಡಿಕ್ಕಿಹೊಡೆದಿದೆ.
ತಕ್ಷಣ ಬೈಕ್ ಸವಾರನನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಬಳಿಕ ಆಸ್ಪತ್ರೆಯಲ್ಲಿ ಮೃತಪಟ್ಟರೆಂದು ತಿಳಿದು ಬಂದಿದೆ.
Kshetra Samachara
24/11/2020 04:46 pm