ಉಡುಪಿ: ಉಡುಪಿಯ ಬೈಲೂರು ಚಂದು ಮೈದಾನದ ಸನಿಹದ ಕಾಲುದಾರಿ ಓಣಿಯಲ್ಲಿ ಅಸಹಾಯಕ ಸ್ಥಿತಿಯಲ್ಲಿ ಬಿದ್ದಿದ್ದ ವ್ಯಕ್ತಿಯೋರ್ವರನ್ನು ಜಿಲ್ಲಾ ನಾಗರಿಕ ಸಮಿತಿಯ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಅವರು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಿದ್ದರು. ಆದರೆ, ಪರೀಕ್ಷಿಸಿದ ವೈದ್ಯರು ವ್ಯಕ್ತಿ ಮೃತಪಟ್ಟಿರುವುದನ್ನು ದೃಢೀಕರಿಸಿದ್ದಾರೆ.
ಮೃತ ವ್ಯಕ್ತಿಯ ಗಂಟಲು ದ್ರವ ಪರೀಕ್ಷೆಗೆ ಒಳಪಡಿಸಿ, ಸಂಬಂಧಿಕರ ಬರುವಿಕೆಗಾಗಿ ಶವವನ್ನು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದೆ. ಮೃತ ವ್ಯಕ್ತಿಯನ್ನು ಸ್ಥಳೀಯ ನಿವಾಸಿಯೆಂದು ಗುರುತಿಸಲಾಗಿದೆ. ಹೃದಯ ಸಂಬಂಧಿತ ಕಾಯಿಲೆ ಅವರಿಗಿತ್ತು ಎನ್ನುವ ಮಾಹಿತಿ ಲಭ್ಯವಾಗಿದೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
02/12/2020 01:00 pm