ಪಡುಬಿದ್ರಿ: ದ್ವಿಚಕ್ರ ವಾಹನಕ್ಕೆ ಟೆಂಪೋ ಡಿಕ್ಕಿಯಾಗಿ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಪಡುಬಿದ್ರಿ ಠಾಣಾ ವ್ಯಾಪ್ತಿಯ ಎರ್ಮಾಳು ಜಾಮಿಯಾ ಮಸೀದಿ ಬಳಿ ನಡೆದಿದೆ.
ಗಾಯಗೊಂಡವರನ್ನು ಕೊಂಬಗುಡ್ಡೆ ಸಮೀಪದ ಶಂಶಾದ್ , ಸಲೀಂ ಎಂದು ಗುರುತಿಸಲಾಗಿದೆ.ಉಚ್ಚಿಲದಿಂದ ಪಡುಬಿದ್ರಿ ಕಡೆಗೆ ಚಲಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಪಡುಬಿದ್ರಿ ಕಡೆಯಿಂದ ವಿರುದ್ಧ ದಿಕ್ಕಿನಿಂದ ಬಂದ ಟೆಂಪೋ ಮಸೀದಿ ಬಳಿಯ ಹೆದ್ದಾರಿ ಕ್ರಾಸ್ ಬಳಿ ಡಿಕ್ಕಿ ಹೊಡೆದಿದೆ.
ಅಪಘಾತದ ತೀವ್ರತೆಗೆ ದ್ವಿಚಕ್ರ ವಾಹನ ಸವಾರರು ರಸ್ತೆಗೆಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಕೂಡಲೇ ಆಂಬ್ಯುಲೆನ್ಸ್ ಮೂಲಕ ಉಡುಪಿ ಆಸ್ಪತ್ರೆಗೆ ಸಾಗಿಸಲಾಗಿದೆ.
Kshetra Samachara
11/12/2020 01:20 pm