ಮಂಗಳೂರು: ಜಾನುವಾರು ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ 10 ದನಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತೀರ್ಥಹಳ್ಳಿ ತಾಲೂಕಿನ ಮಾಳೂರು ಪೊಲೀಸ್ ಠಾಣೆ ವ್ಯಾಪ್ತಿಯ ದಾನಸಾಲೆ ಹೊರಬೈಲು ಬಳಿ ನಡೆದಿದೆ.
ದಾವಣಗೆರೆಯಿಂದ ಮಂಗಳೂರಿಗೆ ದನಗಳನ್ನು ಸಾಗಿಸುತ್ತಿದ್ದ ಲಾರಿ ಪಲ್ಟಿಯಾದ್ದು, 10 ದನಗಳು ಸ್ಥಳದಲ್ಲೇ ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚಿನ ದನಗಳು ಗಾಯಗೊಂಡಿದೆ.
ಲಾರಿಯಲ್ಲಿ ಸಾಗಿಸಲಾಗುತ್ತಿದ್ದ ದನಗಳನ್ನು ಮಂಗಳೂರಿನ ಗೋಶಾಲೆಗೆ ಸಾಗಿಸಲಾಗುತ್ತಿತ್ತೋ ಅಥವಾ ಕಸಾಯಿಖಾನೆಗೆ ಸಾಗಿಸಲಾಗುತ್ತಿತ್ತೋ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.
ಘಟನೆ ನಡೆದ ಕೂಡಲೇ ಲಾರಿಯ ಚಾಲಕ ಹಾಗೂ ಕ್ಲೀನರ್ ಪರಾರಿಯಾಗಿದ್ದಾರೆ. ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
11/12/2020 08:53 pm