ಬೆಳ್ತಂಗಡಿ: ಕುಡಿದ ಮತ್ತಿನಲ್ಲಿ ಟೆಂಪೋ ಟ್ರಾವೆಲರ್ ಚಲಾಯಿಸಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಉಜಿರೆ- ಧರ್ಮಸ್ಥಳ ಮಧ್ಯೆ ಕನ್ಯಾಡಿ ಸಮೀಪದ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಡಿಕ್ಕಿ ಹೊಡೆದ ರಭಸಕ್ಕೆ ವಿದ್ಯುತ್ ಕಂಬ ತುಂಡಾಗಿ ರಸ್ತೆ ಮಧ್ಯೆ ಬಿದ್ದು ವಿದ್ಯುತ್ ಸಂಪರ್ಕ ಸ್ಥಗಿತಗೊಂಡಿದೆ. ಅಪಘಾತದ ವೇಳೆ ವಿದ್ಯುತ್ ಸಂಪರ್ಕ ಕಡಿತಗೊಂಡ ಹಿನ್ನೆಲೆಯಲ್ಲಿ ದೊಡ್ಡದೊಂದು ಅನಾಹುತ ತಪ್ಪಿದೆ.
ಟೆಂಪೋ ಟ್ರಾವೆಲರ್ ನಲ್ಲಿದ್ದ ಚಾಲಕ ಹಾಗೂ ಆತನ ಸ್ನೇಹಿತ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತ ನಡೆಸಿ ಸ್ಥಳದಿಂದ ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕಾಗಮಿಸಿದ ಮೆಸ್ಕಾಂ ಸಿಬ್ಬಂದಿ, ರಸ್ತೆ ಮೇಲೆ ತುಂಡಾಗಿ ಬಿದ್ದ ವಿದ್ಯುತ್ ಕಂಬದ ತೆರವು ಕಾರ್ಯಾಚರಣೆ ನಡೆಸಿದ್ದಾರೆ.
ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
Kshetra Samachara
14/12/2020 08:49 am