ಮುಲ್ಕಿ: ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಸಮೀಪದ ಬಪ್ಪನಾಡು ಬಳಿ ನಡೆದ ಅಪಘಾತದಲ್ಲಿ ಮಹಿಳೆ ಮೃತ ಪಟ್ಟಿದ್ದಾರೆ.
ಮೃತ ಮಹಿಳೆಯನ್ನು ಹೆಜಮಾಡಿ ಕೊಕ್ರಾಣಿ ನಿವಾಸಿ ಅಪ್ಪಿ ಸಾಲ್ಯಾನ್(85) ಎಂದು ಗುರುತಿಸಲಾಗಿದೆ. ಮೃತ ಮಹಿಳೆಯು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಮಂಗಳೂರಿನಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಬೈಕ್ ಡಿಕ್ಕಿ ಹೊಡೆದಿದೆ.
ಅಪಘಾತದ ತೀವ್ರತೆಗೆ ಮಹಿಳೆಯ ತಲೆಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾರೆ. ಅಪಘಾತದಿಂದ ಬೈಕ್ ಸವಾರ ಮತ್ತು ಸಹ ಸವಾರ ಗಂಭೀರ ಗಾಯಗೊಂಡಿದ್ದಾರೆ. ಸುರತ್ಕಲ್ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
Kshetra Samachara
14/12/2020 01:16 pm