ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಸಾಲಬಾಧೆಯಿಂದ ವ್ಯಕ್ತಿ ಆತ್ಮಹತ್ಯೆಗೆ ಶರಣು

ಉಡುಪಿ: ಮನನೊಂದ ವ್ಯಕ್ತಿಯೋರ್ವರು ಮನೆಯ ಮಲಗುವ ಕೊಠಡಿಯಲ್ಲಿ ಫ್ಯಾನಿಗೆ ನೇಣುಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ ನಗರದ ಪುತ್ತೂರು ಗ್ರಾಮದ ನಾರಾಯಣ ನಗರದಲ್ಲಿ ಇಂದು ನಡೆದಿದೆ.

ವಿಠಲ ಪ್ರಭು ಎಂಬವರ ಮಗ ಕೃಷ್ಣ ಪ್ರಭು (53) ಆತ್ಮಹತ್ಯೆ ಮಾಡಿಕೊಂಡವರು. ಮೃತರು ಸಾಲ ಬಾಧೆಯಿಂದ ಕಂಗೆಟ್ಟಿದ್ದರು ಎನ್ನಲಾಗಿದೆ.

ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಜರು ಪ್ರಕ್ರಿಯೆಯನ್ನು ಪೋಲಿಸರು ನಡೆಸಿದರು. ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಅವರು ಶವವನ್ನು ವೈದ್ಯಕೀಯ ಪರೀಕ್ಷೆ ನಡೆಸಲು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಸಾಗಿಸಲು ಉಚಿತ ಆ್ಯಂಬುಲೆನ್ಸ್ ಸೇವೆ ಒದಗಿಸಿ ಸಹಕರಿಸಿದರು.

Edited By : Nagesh Gaonkar
Kshetra Samachara

Kshetra Samachara

24/12/2020 04:17 pm

Cinque Terre

25.5 K

Cinque Terre

0