ಮಂಗಳೂರು: ಅಪಾರ್ಟ್ ಮೆಂಟ್ ಒಂದರ ಪಾರ್ಕಿಂಗ್ ಜಾಗದಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಹಾಗೂ ಸೈಕಲ್ ಗಳು ಬೆಂಕಿಗಾಹುತಿಯಾದ ಘಟನೆ ನಗರದ ಕದ್ರಿ ಕಂಬಳದಲ್ಲಿ ನಡೆದಿದೆ.
ಪಾರ್ಕಿಂಗ್ ನಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನದ ಬ್ಯಾಟರಿಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಈ ಅವಘಡ ನಡೆದಿದೆ ಎನ್ನಲಾಗಿದೆ. ನಾಲ್ಕು ದ್ವಿಚಕ್ರ ವಾಹನಗಳು ಸೇರಿದಂತೆ ಸೈಕಲ್ ಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಸ್ಥಳಕ್ಕೆ ಪಾಂಡೇಶ್ವರ ಅಗ್ನಿ ಶಾಮಕ ದಳ ಹಾಗೂ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Kshetra Samachara
30/09/2020 10:51 pm