ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ನಗರದಲ್ಲಿ ಎರಡು ಕಡೆ ಅಪಘಾತ; ಇಬ್ಬರ ದುರ್ಮರಣ

ಮಂಗಳೂರು: ನಗರದಲ್ಲಿ ನಡೆದ ಪ್ರತ್ಯೇಕ ರಸ್ತೆ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ ಘಟನೆ ಮಂಗಳೂರಿನ ಮರೋಳಿ ಬಳಿ ನಡೆದಿದೆ.

ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆ ಬಳಿ ರಸ್ತೆ ಬದಿಯಲ್ಲಿ ನಿಂತಿದ್ದ ಟಿಪ್ಪರ್ ಲಾರಿಗೆ ಪಡೀಲ್ ಕಡೆಯಿಂದ ಬಂದ ರಿಕ್ಷಾ, ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ತೀವ್ರ ವಾಗಿ ಗಾಯಗೊಂಡ ರಿಕ್ಷಾ ಚಾಲಕ ವಲಚ್ಚಿಲ್ ನಿವಾಸಿ ಸಲೀಂ ಅವರನ್ನು ವೆನ್ ಲಾಕ್ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

ಇನ್ನೊಂದು ಕಡೆ ಆಟೋ ರಿಕ್ಷಾ ಡಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿ ನಸೀರ್ ಎಂಬವರು ಮೃತಪಟ್ಟಿದ್ದಾರೆ. ಈ ಕುರಿತು ಮಂಗಳೂರು ಪೂರ್ವ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By :
Kshetra Samachara

Kshetra Samachara

07/10/2020 11:33 am

Cinque Terre

16.51 K

Cinque Terre

0