ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ
ಮನೆ ಹಿಂಬದಿಯ ಅವರಣಗೋಡೆ ಕುಸಿದು ಬಿದ್ದು ಸುಮಾರು 36ರ ಹರೆಯದ ಮಹಿಳೆಯೊಬ್ಬರು ಮಣ್ಣಿನಡಿಯಲ್ಲಿ ಸಿಲುಕಿ, ಅಪಾಯದಿಂದ ಪಾರಾದ ಘಟನೆ ನಗರದ ಬಿಕರ್ನಕಟ್ಟೆ ಸಮೀಪ ನಡೆದಿದೆ.
ಅಗ್ನಿಶಾಮಕ ದಳದ ಕಾರ್ಯಾಚರಣೆಯಿಂದ ಮಣ್ಣಿನಡಿಯಲ್ಲಿ ಸಿಲುಕಿದ್ದ ಮಹಿಳೆಯನ್ನು ರಕ್ಷಣೆ ಮಾಡಲಾಗಿದೆ.
ನಿನ್ನೆ ರಾತ್ರಿಯಿಂದ ಸುರಿಯುತ್ತಿರುವ ಭಾರಿ ಮಳೆಗೆ ನಗರದಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಇನ್ನೂ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇರುವುದರಿಂದ ಈಗಾಗಲೇ ಜಿಲ್ಲಾಡಳಿತ ಜಿಲ್ಲೆಯಲ್ಲಿ ಅರೆಂಜ್ ಅಲರ್ಟ್ ಘೋಷಿಸಿದೆ.
Kshetra Samachara
19/09/2020 05:57 pm