ಕಾರ್ಕಳ: ತಾಲೂಕಿನ ಬಜಗೋಳಿಯ ಮಿಯ್ಯಾರು ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊಸ ವರ್ಷಕ್ಕೆ ಸ್ವಾಗತ ಕೋರುವ “ಹ್ಯಾಪಿ ನ್ಯೂ ಇಯರ್- 2021" ಎಂದು ಬರೆಯುತ್ತಿದ್ದ ವೇಳೆ ಇಕೋ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲಿಯೇ ದಾರುಣವಾಗಿ ಸಾವನ್ನಪ್ಪಿದ ಘಟನೆ ಗುರುವಾರ ರಾತ್ರಿ ನಡೆದಿದೆ.
ಅಪಘಾತ ನಡೆದು, ಕೆಲವು ಸಮಯದವರೆಗೂ ಈ ಯುವಕರು ರಕ್ತದ ಮಡುವಿನಲ್ಲಿ ಒದ್ದಾಡಿ, ಬಳಿಕ ಸಾವನ್ನಪ್ಪಿರುವುದಾಗಿ ಸ್ಥಳೀಯರು ಪೊಲೀಸರಿಗೆ ತಿಳಿಸಿದ್ದಾರೆ. ಈ ಕುರಿತು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
01/01/2021 12:32 am