ಕಾಪು: ನಾಪತ್ತೆಯಾಗಿದ್ದ ವ್ಯಕ್ತಿಯೋರ್ವರು ಬಾವಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ಶಿರ್ವ ಠಾಣಾ ವ್ಯಾಪ್ತಿಯ ಬಂಟಕಲ್ಲು ಹೇರೂರು ಎಂಬಲ್ಲಿ ನಡೆದಿದೆ.
ಮೃತರನ್ನು ಜಾನ್ ಡಿಸೋಜ (69) ಎಂದು ಗುರುತಿಸಲಾಗಿದೆ. ರಾತ್ರಿ ಮನೆಯಲ್ಲಿ ಊಟ ಮಾಡಿ ಮಲಗಿದ ಜಾನ್ ಡಿಸೋಜ ಬೆಳಿಗ್ಗೆ ನಾಪತ್ತೆಯಾಗಿದ್ದರು. ಮನೆ ಮಂದಿ ಹುಡುಕಾಡಿದಾಗ ಮನೆಯ ಬಾವಿಯಲ್ಲಿ ಶವ ಇರುವುದು ಪತ್ತೆಯಾಗಿದೆ.
ಸ್ಥಳಕ್ಕೆ ಧಾವಿಸಿದ ಶಿರ್ವ ಪೊಲೀಸರು ಮಲ್ಪೆಯ ಈಜು ತಜ್ಞ ಈಶ್ವರ್ ಅವರ ಸಹಕಾರದಿಂದ ಶವವನ್ನು ಬಾವಿಯಿಂದ ಮೇಲೆತ್ತಿದ್ದಾರೆ.
ಘಟನೆ ಬಗ್ಗೆ ಸಂಪೂರ್ಣ ಮಾಹಿತಿ ಇನ್ನಷ್ಟೇ ಲಭಿಸಬೇಕಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Kshetra Samachara
13/01/2021 08:37 pm