ಪಡುಬಿದ್ರಿ: ಪಡುಬಿದ್ರಿ ಠಾಣೆ ವ್ಯಾಪ್ತಿಯ ಅದಮಾರಿನ ರೈಲು ಹಳಿಯ ಬಳಿಯಲ್ಲಿ ಪುರುಷನ ಶವ ಪತ್ತೆಯಾಗಿದೆ. ಮೃತದೇಹ ಬಾಗಲಕೋಟೆ ಮೂಲದ ಹುಲ್ಲಪ್ಪ ಅವರದ್ದು ಎಂದು ಗುರುತಿಸಲಾಗಿದೆ. ಅವರು ವಿವಾಹಿತನಾಗಿದ್ದು, ಎರಡು ಮಕ್ಕಳಿದ್ದಾರೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕಾಪು ಸಮಾಜಸೇವಕರಾದ ಸೂರಿ ಶೆಟ್ಟಿ ಮತ್ತು ನಾಗರಾಜ್ ಆಂಬ್ಯುಲೆನ್ಸ್ ಮೂಲಕ ಶವವನ್ನು ಪಡುಬಿದ್ರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಶವಾಗಾರಕ್ಕೆ ರವಾನಿಸಿದ್ದಾರೆ. ಪಡುಬಿದ್ರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲಿಸಿದರು.
Kshetra Samachara
17/01/2021 10:19 am