ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಟ್ಲ: ದ್ವಿಚಕ್ರ ವಾಹನಗಳ ನಡುವೆ ಅಪಘಾತ; ಐವರಿಗೆ ಗಂಭೀರ ಗಾಯ

ಬಂಟ್ವಾಳ: ತಾಲೂಕಿನ ವಿಟ್ಲದ ಕಾಶಿಮಠ ಎಂಬಲ್ಲಿ ಎರಡು ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತ ಸಂಭವಿಸಿ ಒಟ್ಟು ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಭಾನುವಾರ ರಾತ್ರಿ ಘಟನೆ ನಡೆದಿದೆ. ವಿಟ್ಲ ಸಮೀಪದ ಕೇಪು ಕಡೆಯಿಂದ ವಿಟ್ಲ ಪೇಟೆಗೆ ಬಂದು ತನ್ನ ಸ್ನೇಹಿತನನ್ನು ಬೆಂಗಳೂರು ಬಸ್ ಗೆ ಬಿಡಲೆಂದು ಡಿಯೋ ವಾಹನದಲ್ಲಿ ಬರುತ್ತಿದ್ದಾಗ, ವಿಟ್ಲ ಕಡೆಯಿಂದ ಕನ್ಯಾನಕ್ಕೆ ಕಡೆಗೆ ತೆರಳುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಎರಡು ವಾಹನದಲ್ಲಿದ್ದ ಒಟ್ಟು ಐದು ಮಂದಿ ಗಾಯಗೊಂಡಿದ್ದಾರೆ. ಗಾಯಾಳುವನ್ನು ವಿಟ್ಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಆಂಬ್ಯುಲೆನ್ಸ್ ಮೂಲಕ ಮಂಗಳೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿದ್ದಾರೆ.

Edited By : Nagaraj Tulugeri
Kshetra Samachara

Kshetra Samachara

24/01/2021 09:37 pm

Cinque Terre

13.76 K

Cinque Terre

0

ಸಂಬಂಧಿತ ಸುದ್ದಿ