ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಉದ್ಯಾವರ ಸೇತುವೆ ಬಳಿ ತಂಪು ಪಾನೀಯ ಸಾಗಾಟದ ಟೆಂಪೋ ಪಲ್ಟಿ

ಕಟಪಾಡಿ: ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಸೇತುವೆ ಬಳಿ ಟೆಂಪೋ ಪಲ್ಟಿಯಾದ ಘಟನೆ ಇಂದು ಬೆಳಗ್ಗೆ 8 ಗಂಟೆ ಸುಮಾರಿಗೆ ನಡೆದಿದೆ.

ತಂಪು ಪಾನೀಯ ಸರಬರಾಜು ಮಾಡುವ ಟೆಂಪೋ ಇದಾಗಿದ್ದು, ಅದೃಷ್ಟವಶಾತ್ ಟೆಂಪೋದಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.

ಕಾಪು ಪೊಲೀಸ್ ಠಾಣೆ ವ್ಯಾಪ್ತಿಯ ಕಟಪಾಡಿ ಹೊರಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Edited By : Manjunath H D
Kshetra Samachara

Kshetra Samachara

25/01/2021 05:15 pm

Cinque Terre

15.94 K

Cinque Terre

0