ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾಪು: ತಾನೇ ಹಾಕಿದ್ದ ಬಲೆಗೆ ಸಿಲುಕಿ ಮೀನುಗಾರ ಸಾವು!

ಕಾಪು: ಸಾಂಪ್ರದಾಯಿಕ ವಿಧಾನದ ಮೀನುಗಾರಿಕೆಗೆ ಸಮುದ್ರಕ್ಕೆ ತೆರಳಿದ್ದ ಹಿರಿಯ ಮೀನುಗಾರರೊಬ್ಬರು ತಾನೇ ಹಾಕಿದ್ದ ಬಲೆಗೆ ಸಿಲುಕಿ ಮೃತಪಟ್ಟ ದಾರುಣ ಘಟನೆ ಸೋಮವಾರ ಬೆಳಗ್ಗೆ ಕಾಪು ಲೈಟ್ ಹೌಸ್ ಬಳಿ ನಡೆದಿದೆ.

ಕಾಪು ಗರಡಿ ಬಳಿ ನಿವಾಸಿ ಕಾಸ್ಮರ್ (65) ಮೃತಪಟ್ಟವರು.ಸೋಮವಾರ ಬೆಳಗ್ಗೆ ಮೀನು ಹಿಡಿಯಲು ತೆರಳಿದ್ದ ಅವರು, ಮೀನುಗಾರಿಕೆಯಲ್ಲಿ ನಿರತರಾಗಿದ್ದ ವೇಳೆಯೇ ತನ್ನ ಬಲೆಯೊಳಗೇ ಸಿಲುಕಿ, ಸಮುದ್ರಕ್ಕೆ ಬಿದ್ದು ಮೃತಪಟ್ಟಿರಬೇಕೆಂದು ಸಂಶಯಿಸಲಾಗಿದೆ.

ಕಾಸ್ಮಾರ್ ನೀರಿನಲ್ಲಿ‌ ಮುಳುಗುತ್ತಿರುವುದನ್ನು ಸ್ಥಳೀಯ ಮೀನುಗಾರರು ಗಮನಿಸಿದ್ದು, ತಕ್ಷಣ ಅವರ ನೆರವಿಗೆ ಧಾವಿಸಿದ್ದರು.‌ ಆದರೆ, ಅಷ್ಟರಲ್ಲೇ ಅವರು ಮೃತಪಟ್ಟಿದ್ದರು. ಮೃತದೇಹವನ್ನು ಮೇಲಕ್ಕೆತ್ತಲಾಗಿದ್ದು, ಕಾಪು‌ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ತನಿಖೆ ನಡೆಸುತ್ತಿದ್ದಾರೆ.

Edited By : Manjunath H D
Kshetra Samachara

Kshetra Samachara

08/02/2021 05:13 pm

Cinque Terre

19.75 K

Cinque Terre

1