ನೆಲ್ಯಾಡಿ: ಶಾರ್ಟ್ ಸರ್ಕ್ಯೂಟ್ಗೆ ಒಳಗಾಗಿ ಪ್ಯಾಸೆಂಜರ್ ವಾಹನವೊಂದು ಸಂಪೂರ್ಣ ಸುಟ್ಟುಹೋದ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಮಣ್ಣಗುಂಡಿ ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದೆ.
ಶಿರಾಡಿಯಿಂದ ನೆಲ್ಯಾಡಿಗೆ ಬರುತ್ತಿದ್ದ ಈ ವಾಹನದಲ್ಲಿ ಚಾಲಕ ಸೇರಿ ಮೂವರು ಪ್ರಯಾಣಿಸುತ್ತಿದ್ದರು. ಮಣ್ಣಗುಂಡಿ ಸಮೀಪಿಸುತ್ತಿದ್ದಂತೆಯೇ ವಾಹನದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಈ ಬಗ್ಗೆ ಅರಿತ ಚಾಲಕ ವಾಹನವನ್ನು ರಸ್ತೆ ಬದಿಗೆ ನಿಲ್ಲಿಸಿದರು. ಒಂದೆಡೆ ಬೆಂಕಿಯ ಜ್ವಾಲೆ ಹೆಚ್ಚಾಗಿ ವಾಹನ ಸಂಪೂರ್ಣ ಸುಟ್ಟುಹೋಗಿದೆ. ಚಾಲಕ ಸೇರಿದಂತೆ ಮೂವರು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.
Kshetra Samachara
09/02/2021 06:16 pm