ಬಂಟ್ವಾಳ : ಲಾರಿ ಮತ್ತು ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಸವಾರನಿಗೆ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಎಂಬಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದೆ.
ಪೇರಮುಗೇರು ನಿವಾಸಿ ರುಕ್ಮಯ ಗಾಯಗೊಂಡ ಆಕ್ಟೀವಾ ಸವಾರ. ಉಪ್ಪಿನಂಗಡಿ ಕಡೆಯಿಂದ ಮಾಣಿ ಕಡೆಗೆ ಹೋಗುತ್ತಿದ್ದ ಆಕ್ಟೀವಾ ವಾಹನಕ್ಕೆ ಹಿಂದಿನಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಆಕ್ಟೀವಾ ನಜ್ಜುಗುಜ್ಜಾಗಿದ್ದು, ಸವಾರ ಸಣ್ಣಪುಟ್ಟ ಗಾಯಗಳಿಂದ ಪವಾಢದೃಶ್ಯ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
Kshetra Samachara
21/08/2021 09:25 am