ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾಪು: ನಿಂತ ಲಾರಿಗೆ ಸ್ಕೂಟರ್ ಡಿಕ್ಕಿ ಸವಾರ ಗಂಭೀರ

ಕಾಪು: ರಸ್ತೆ ಪಕ್ಕದಲ್ಲಿ ನಿಂತ ಲಾರಿಗೆ ಸ್ಕೂಟರ್ ಡಿಕ್ಕಿಯಾಗಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಮೂಳೂರಿನಲ್ಲಿ ಸಂಭವಿಸಿದೆ.

ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಸವಾರಿ ಮಾಡಿಕೊಂಡು ಹೋಗುತ್ತಿದ್ದ ಸ್ಕೂಟರ್ ರಾಷ್ಟ್ರೀಯ ಹೆದ್ದಾರಿ 66 ರ ಮೂಳೂರಿನಲ್ಲಿ ಹೆದ್ದಾರಿ ಪಕ್ಕದಲ್ಲಿ ನಿಲ್ಲಿಸಲಾದ ಲಾರಿಗೆ ಡಿಕ್ಕಿಯಾಗಿ ಪರಿಣಾಮ ಸ್ಕೂಟರ್ ಲಾರಿಯ ಅಡಿಯಲ್ಲಿ ಸಿಲುಕಿದ್ದು, ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ.ಗಾಯಾಳುವನ್ನು ಚಿಕಿತ್ಸೆಗಾಗಿ ಉಡುಪಿಯ ಆಸ್ಪತ್ರೆಗೆ ಸಾಗಿಸಲಾಗಿದೆ.ಸ್ಕೂಟರ್ ಸವಾರನ ಗುರುತು ಇನ್ನಷ್ಟೆ ಪತ್ತೆಯಾಗಬೇಕಿದೆ.

Edited By : Nagesh Gaonkar
Kshetra Samachara

Kshetra Samachara

22/08/2021 04:36 pm

Cinque Terre

25.62 K

Cinque Terre

1

ಸಂಬಂಧಿತ ಸುದ್ದಿ