ಬಂಟ್ವಾಳ: ಮೈಸೂರಿನ ಪಿರಿಯಾಪಟ್ಟಣದಲ್ಲಿ ಸಂಭವಿಸಿದ ಅಪಘಾತದಲ್ಲಿ ಬಂಟ್ವಾಳ ಕೆಳಗಿನ ಪೇಟೆಯ ಇಬ್ಬರು ಗಾಯಗೊಂಡಿರುವ ಘಟನೆ ಮಂಗಳವಾರ ನಡೆದಿದೆ. ಅಪಘಾತದಲ್ಲಿ ಕೆಳಗಿನಪೇಟೆಯ ನಿವಾಸಿ ಶಂಸುದ್ದೀನ್ ಮತ್ತು ಮೆಲ್ಕಾರ್ ಬೋಗೋಡಿ ನಿವಾಸಿ ಫಯಾಝ್ ಎಂಬವರು ಗಾಯಗೊಂಡಿದ್ದಾರೆ.
ಗಾಯಳುಗಳು ತೆರಳುತ್ತಿದ್ದ ಇನ್ನೋವ ಕಾರಿಗೆ ಸರ್ಕಾರಿ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದಿಂದ ಕಾರು ಸಂಪೂರ್ಣ ಜಖಂಗೊಂಡಿದೆ. ಆದರೆ ಇಬ್ಬರೂ ಪ್ರಾಣಪಾಯದಿಂದ ಪಾರಾಗಿದ್ದಾರೆ. ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ಕರೆತರಲಾಗುತ್ತಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
Kshetra Samachara
24/08/2021 08:56 pm