ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾರ್ಕಳ: ಕಾರು ರಿಕ್ಷಾ ಢಿಕ್ಕಿ: ರಿಕ್ಷಾ ಚಾಲಕ ಸಾವು

ಕಾರ್ಕಳ: ಕಾರು ಹಾಗೂ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ರಿಕ್ಷಾ ಚಾಲಕ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರು ಸಮೀಪ ನಡೆದಿದೆ.

ಶೇಖರ ಮೂಲ್ಯ(58) ಸಾವಿಗೀಡಾದ ಆಟೋ ಚಾಲಕ. ಶೇಖರ ಮೂಲ್ಯ ಪ್ರಯಾಣಿಕರೊಬ್ಬರನ್ನು ಅಜೆಕಾರಿಗೆ ಬಿಟ್ಟು ವಾಪಾಸು ಕಾಡುಹೊಳೆ ರಿಕ್ಷಾ ಸ್ಟ್ಯಾಂಡ್ ಗೆ ಬರುತ್ತಿದ್ದಾಗ ದೊಂಡೇರಂಗಡಿ ಕಡೆಯಿಂದ ಅತೀವೇಗವಾಗಿ  ಬಂದ ಟವೇರಾ ವಾಹನ ನೂಜಿಗುರಿಯ ತಿರುವಿನಲ್ಲಿ ಶೇಖರ ಮೂಲ್ಯ ಚಲಾಯಿಸುತ್ತಿದ್ದ ರಿಕ್ಷಾಗೆ ರಭಸವಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಶೇಖರ್ ಅವರಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿ ಆಗದೇ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಅಜೆಕಾರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..

Edited By : PublicNext Desk
Kshetra Samachara

Kshetra Samachara

31/08/2021 03:09 pm

Cinque Terre

11.53 K

Cinque Terre

0