ಕಾಪು: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ನಾಲ್ಕು ವಾಹನಗಳಿಗೆ ಡಿಕ್ಕಿಯಾಗಿ ವಾಹನಗಳು ಸಂಪೂರ್ಣ ನಜ್ಜುಗುಜ್ಜಾದ ಘಟನೆ ಪಡುಬಿದ್ರಿ ಬಂಟರ ಭವನದ ವಿರುದ್ದ ದಿಕ್ಕಿನಲ್ಲಿರುವ ಹೊಟೇಲ್ ಪ್ಯಾರಡೈಸ್ ಮುಂಭಾಗದಲ್ಲಿ ಸಂಭವಿಸಿದೆ.
ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಸರಕು ಹೊತ್ತು ಸಾಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ಕಳೆದುಕೊಂಡು ರಾಷ್ಟ್ರೀಯ ಹೆದ್ದಾರಿ 66 ರ ಪಡುಬಿದ್ರಿಯ ಪ್ಯಾರಡೈಸ್ ಹೊಟೇಲ್ ಮುಂಭಾಗದಲ್ಲಿ ನಿಲ್ಲಿಸಲಾದ ಒಂದು ಕಾರು ಮೂರು ದ್ವಿಚಕ್ರ ವಾಹನಗಳಿಗೆ ಡಿಕ್ಕಿಹೊಡೆದಿದೆ.ಪರಿಣಾಮ ವಾಹನಗಳು ಸಂಪೂರ್ಣ ಜಖಂಗೊಂಡಿದೆ.ದ್ವಿಚಕ್ರ ಸವಾರರು ಮತ್ತು ಕಾರು ಪ್ರಯಾಣಿಕರು ಹೊಟೇಲ್ ಒಳಗೆ ಇದ್ದ ಕಾರಣ ಭಾರೀ ಅನಾಹುತ ತಪ್ಪಿದೆ.ಸ್ಥಳಕ್ಕೆ ಪಡುಬಿದ್ರಿ ಪೊಲೀಸರು ಧಾವಿಸಿ ತನಿಖೆ ನಡೆಸಿದ್ದಾರೆ.
Kshetra Samachara
31/08/2021 05:03 pm