ಉಪ್ಪಿನಂಗಡಿ: ಬುಧವಾರ ಸಂಜೆ ಕಡಬ ಸಮೀಪದ ಕೆಮ್ಮಾರ ಸೇತುವೆಯ ಬಳಿ ಸ್ಥಳೀಯ ನಿವಾಸಿ ಶಫೀಕ್(19) ಎಂಬಾತ ನೀರುಪಾಲಾಗಿದ್ದ. ವಿಪರೀತ ಮಳೆಯ ಹಿನ್ನೆಲೆಯಲ್ಲಿ ನದಿಯಲ್ಲಿ ನೀರಿನ ಹರಿವು ಜೋರಾಗಿದ್ದು, ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಉಪ್ಪಿನಂಗಡಿ ಪೊಲೀಸರು ಊರವರ ಸಹಾಯದಿಂದ ಯುವಕನ ಶೋಧ ಕಾರ್ಯವನ್ನು ಆರಂಭಿಸಿದ್ದರು. ಬುಧವಾರ ರಾತ್ರಿಯಾದರೂ ಯಾವುದೇ ಸುಳಿವು ಪತ್ತೆಯಾಗದ ಹಿನ್ನೆಲೆಯಲ್ಲಿ ಶೋಧ ಕಾರ್ಯವನ್ನು ಸ್ಥಗಿತಗೊಳಿಸಲಾಗಿತ್ತು. ಇಂದು ಮತ್ತೆ ಶೋಧ ಕಾರ್ಯ ಆರಂಭಿಸಲಾಗಿದ್ದು, ಗುರುವಾರ ಸಂಜೆ ವೇಳೆಗೆ ಉಪ್ಪಿನಂಗಡಿಯ ನೇತ್ರಾವತಿ ಸೇತುವೆ ಬಳಿ ಮೃತದೇಹ ಪತ್ತೆಯಾಗಿದೆ.
Kshetra Samachara
02/09/2021 07:51 pm